ಹತ್ರಾಸ್ ಸಾಮೂಹಿಕ ಅತ್ಯಾಚಾರ ಪ್ರಕರಣ: ಆರೋಪಿ ಸಂದೀಪ್ ಸಿಸೋಡಿಯಾಗೆ ಜೀವಾವಧಿ ಶಿಕ್ಷೆ!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

ಉತ್ತರ ಪ್ರದೇಶದ ಹತ್ರಾಸ್ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಪ್ರಮುಖ ಆರೋಪಿ ಸಂದೀಪ್ ಸಿಸೋಡಿಯಾಗೆ ಎಸ್‌ಸಿ/ಎಸ್‌ಟಿ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ.

ಭಾರತೀಯ ದಂಡ ಸಂಹಿತೆಯ ಸೆಕ್ಷನ್ 304 ರ ಅಡಿಯಲ್ಲಿ ಸಂದೀಪ್ ಅವರದು ನರಹತ್ಯೆಯ ಅಪರಾಧವೆಂದು ಪರಿಗಣಿಸಲಾಗಿದೆ.
ಪ್ರಕರಣದ ನಾಲ್ವರು ಆರೋಪಿಗಳ ಪೈಕಿ ಮೂವರು ಆರೋಪಿಗಳಾದ ರವಿ(35), ಲವ್ ಕುಶ್(23) ಮತ್ತು ರಾಮು (26) ಅವರನ್ನು ಖುಲಾಸೆಗೊಳಿಸಲಾಗಿದ್ದು, ಸಂದೀಪ್(20) ಮಾತ್ರ ಅಪರಾಧಿ ಎಂದು ಸಾಬೀತಾಗಿದೆ.

ಏನಿದು ಹತ್ರಾಸ್ ಪ್ರಕರಣ?
2020 ರ ಸೆಪ್ಟೆಂಬರ್‌ನಲ್ಲಿ ಪಶ್ಚಿಮ ಉತ್ತರ ಪ್ರದೇಶದ ಹತ್ರಾಸ್ ಪ್ರದೇಶದ ಬೂಲ್‌ಗರ್ಹಿಯಲ್ಲಿ ದಲಿತ ಬಾಲಕಿಯ ಮೇಲೆ ಅತ್ಯಾಚಾರ ಮತ್ತು ಗಂಭೀರವಾಗಿ ಗಾಯಗೊಳಿಸಲಾಗಿತ್ತು. 15 ದಿನಗಳ ಜೀವನ್ಮರಣ ಹೋರಾಟದ ನಂತರ, ಸಂತ್ರಸ್ತೆ ದೆಹಲಿಯ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು. ಪೊಲೀಸರು ತರಾತುರಿಯಲ್ಲಿ ಅಂತ್ಯಸಂಸ್ಕಾರ ನೆರವೇರಿಸಿದ್ದರು. ಈ ಪ್ರಕರಣ ದೇಶಾದ್ಯಂತ ಸುದ್ದಿಯಾಗಿತ್ತು.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!