ಹತ್ರಾಸ್ ನಲ್ಲಿ ಕಾಲ್ತುಳಿತ: ಸಾವಿನ ಸಂಖ್ಯೆ 60ಕ್ಕೆ ಏರಿಕೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಉತ್ತರ ಪ್ರದೇಶದ ಹತ್ರಾಸ್ ಜಿಲ್ಲೆಯಲ್ಲಿ ಮಂಗಳವಾರ ಧಾರ್ಮಿಕ ಕಾರ್ಯಕ್ರಮದ ವೇಳೆ ಸಂಭವಿಸಿದ ಕಾಲ್ತುಳಿತದ ದುರ್ಘಟನೆಯಲ್ಲಿ ಮೃತಪಟ್ಟವರ ಸಂಖ್ಯೆ 60 ಮೀರಿದೆ .

ಹತ್ರಾಸ್ ಸಿಕಂದರಾ ರಾವ್ ಪಟ್ಟಣದಲ್ಲಿ ವಿಶೇಷವಾಗಿ ಹಾಕಲಾಗಿದ್ದ ಪೆಂಡಾಲ್​ನಲ್ಲಿ ಧಾರ್ಮಿಕ ಬೋಧಕರೊಬ್ಬರು ತಮ್ಮ ಅನುಯಾಯಿಗಳನ್ನು ಉದ್ದೇಶಿಸಿ ಮಾತನಾಡುತ್ತಿದ್ದಾಗ ಈ ದುರ್ಘಟನೆ ನಡೆದಿದೆ.‍

ಘಟನೆ ಸಂಬಂಧ ಹತ್ರಾಸ್‌ನ ಜಿಲ್ಲಾಧಿಕಾರಿ ಡಿಎಂ ಆಶೀಷ್‌ ಕುಮಾರ್ ಮಾತನಾಡಿದ್ದು, ಸಾವಿನ ಸಂಖ್ಯೆ 50-60ಕ್ಕೆ ಏರಿಕೆ ಆಗಿದ್ದು, ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಮೃತದೇಹಗಳನ್ನು ಹೊರಗೆ ತೆಗೆಯಲಾಗುತ್ತಿದೆ ಎಂದು ಹೇಳಿದ್ದಾರೆ.

ಶಿವನ ಸತ್ಸಂಗದ ವೇಳೆ ಕಾಲ್ತುಳಿತ ಸಂಭವಿಸಿದೆ. ಸಮುದಾಯ ಆರೋಗ್ಯ ಕೇಂದ್ರಗಳಿಗೆ ಅವರೆಲ್ಲರನ್ನೂ ಕೊಂಡೊಯ್ಯಲಾಗಿದೆ. ಅದೇ ರೀತಿ ಹಲವಾರು ಮಂದಿ ಗಾಯಗೊಂಡಿದ್ದು ನಾನಾ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಮೃತಪಟ್ಟವರಲ್ಲಿ ಇಬ್ಬರು ಮಕ್ಕಳೂ ಇದ್ದಾರೆ ಎನ್ನಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!