ಹತ್ರಾಸ್‌ನಲ್ಲಿ ಕಾಲ್ತುಳಿತ: ರಾಷ್ಟ್ರಪತಿ ಮುರ್ಮು, ಪ್ರಧಾನಿ ಮೋದಿ ಸಂತಾಪ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಹತ್ರಾಸ್‌ನಲ್ಲಿ ಕಾಲ್ತುಳಿತ ಸಂಭವಿಸಿ 100 ಕ್ಕೂ ಅಧಿಕ ಜನ ಸಾವನ್ನಪ್ಪಿದ್ದಾರೆ. ಮೃತರ ಕುಟುಂಬಗಳಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಿ ಮೋದಿ, ಕಾಂಗ್ರೆಸ್‌ ಮುಖಂಡ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಹಲವಾರು ರಾಜಕೀಯ ನಾಯಕರು ಸಂತಾಪ ಸೂಚಿಸಿದ್ದಾರೆ.

ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ದ್ರೌಪದಿ ಮುರ್ಮು ಸಂತಾಪ ಸೂಚಿಸಿ ಪೋಸ್ಟ್‌ ಪ್ರಕಟಿಸಿದ್ದಾರೆ. ಈ ಘಟನೆ ಹೃದಯ ವಿದ್ರಾವಕವಾಗಿದ್ದು ಮೃತರಿಗೆ ಸಂತಾಪಗಳು. ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಅವರು ಪ್ರಾರ್ಥಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಸಂತಾಪ ವ್ಯಕ್ತಪಡಿಸಿ, ಹತ್ರಾಸ್‌ನಲ್ಲಿ ನಡೆದ ಘಟನೆ ನನಗೆ ಅತೀವ ನೋವು ತಂದಿದೆ. ಮೃತರ ಕುಟುಂಬಗಳಿಗೆ ನನ್ನ ಸಂತಾಪಗಳು. ಕೂಡಲೇ ಸರ್ಕಾರ ಸಂತ್ರಸ್ತರಿಗೆ ಪರಿಹಾರ ನೀಡಬೇಕು ಎಂದು ಅವರು ಒತ್ತಾಯಿಸಿದ್ದಾರೆ. ಘಟನೆ ಸ್ಥಳದಲ್ಲಿ ಕಾರ್ಯಕರ್ತರು ಸಹಾಯ ನೀಡಬೇಕು ಎಂದು ಅವರು ಹೇಳಿದ್ದಾರೆ. ಮೃತಕುಟುಂಬದವರಿಗೆ ತಲಾ ₹ 2 ಲಕ್ಷ, ಗಾಯಾಳುಗಳಿಗೆ ತಲಾ ₹ 50 ಸಾವಿರ ಪರಿಹಾರ ಘೋಷಣೆ ಮಾಡಿದ್ದಾರೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!