ಹೊಸದಿಗಂತ ಡಿಜಿಟಲ್ ಡೆಸ್ಕ್:
ಜುಲೈ 2 ರಂದು ಉತ್ತರ ಪ್ರದೇಶದ ಹತ್ರಾಸ್‍ನಲ್ಲಿ 121 ಜನರ ಸಾವಿಗೆ ಕಾರಣವಾದ ಕಾಲ್ತುಳಿತ ಪ್ರಕರಣದ ಪ್ರಮುಖ ಆರೋಪಿ ದೇವಪ್ರಕಾಶ್ ಮಧುಕರ್ ದೆಹಲಿಯಲ್ಲಿ ಪೊಲೀಸರಿಗೆ ಶರಣಾಗಿದ್ದಾನೆ. ಆತನನ್ನು ಉತ್ತರ ಪ್ರದೇಶ ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ಆರೋಪಿ ಪರ ವಕೀಲರು ತಿಳಿಸಿದ್ದಾರೆ.
ಪೊಲೀಸರಿಗೆ ಶರಣಾದ ಮಧುಕರ್ ಸತ್ಸಂಗದ ಮುಖ್ಯ ಸೇವಾದಾರನಾಗಿದ್ದ. ಈತ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹತ್ರಾಸ್‍ನ ಸಿಕಂದರಾ ರಾವ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಎಫ್‍ಐಆರ್‍ನಲ್ಲಿ ಹೆಸರಿಸಲಾದ ಏಕೈಕ ಆರೋಪಿಯಾಗಿದ್ದಾನೆ. ಆತ ದೆಹಲಿಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ. ಈ ವೇಳೆ ದೆಹಲಿಯ ಪೊಲೀಸರು, ಎಸ್‍ಐಟಿ ಮತ್ತು ಎಸ್‍ಟಿಎಫ್‍ಗೆ ಕರೆ ಮಾಡಿ ಶರಣಾಗಿದ್ದಾನೆ ಎಂದು ಆತನ ಪರ ವಕೀಲರು ವೀಡಿಯೋ ಸಂದೇಶದ ಮೂಲಕ ತಿಳಿಸಿದ್ದಾರೆ.