ಹೊಸದಿಗಂತ ವರದಿ ಪುತ್ತೂರು:
ಪುತ್ತೂರು ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಗುರುವಾರ ನಾಮಪತ್ರ ಸಲ್ಲಿಸಿದ್ದು, ನಾಮಪತ್ರ ಸಲ್ಲಿಕೆ ವೇಳೆ ಸಾವಿರಾರು ಸಂಖ್ಯೆಯ ಕಾರ್ಯಕರ್ತರು, ಮುಖಂಡರು ಮೆರವಣಿಗೆಯಲ್ಲಿ ಸಾಗಿದ್ದರು.
ಹತ್ತೂರಿನ ಗಮನವನ್ನು ಪುತ್ತೂರು ಸೆಳೆದಿದ್ದು, 15 ಸಾವಿರಕ್ಕೂ ಹೆಚ್ಚಿನ ಸಂಖ್ಯೆಯಲ್ಲಿ ನಾಮಪತ್ರ ಸಲ್ಲಿಕೆಗೆ ಕಾರ್ಯಕರ್ತರು ಜಮಾಯಿಸಿದ್ದರು. ಬಿಜೆಪಿ ರಾಷ್ಟೀಯ ಯುವ ಮೋರ್ಚಾ ಅಧ್ಯಕ್ಷ ತೇಜಸ್ವಿ ಸೂರ್ಯ, ನಟಿ ಶ್ರುತಿ, ಬಿಜೆಪಿ ರಾಜ್ಯಾಧ್ಯಕ್ಷರು ನಳಿನ್ ಕುಮಾರ್ ಕಟೀಲ್, ಜಿಲ್ಲಾಧ್ಯಕ್ಷ ಸುಧರ್ಶನ್, ಮಾಜಿ ಶಾಸಕರಾದ ಸಂಜೀವ ಮತಂದೂರು, ಮಲ್ಲಿಕಾ ಪ್ರಸಾದ್, ಪ್ರತಾಪಸಿಂಹ ನಾಯಕ್ ಮೊದಲಾದವರು ಇದ್ದರು.
ಪುತ್ತೂರು ಮಹಾಲಿಂಗೇಶ್ವರ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಿ ಮುಖ್ಯರಸ್ತೆ ಮೂಲಕ ಬಸ್ ನಿಲ್ದಾಣ ಮಾರ್ಗವಾಗಿ ಕೋರ್ಟ್ ರಸ್ತೆಯ ಮೂಲಕ ತಾಲೂಕು ಆಡಳಿತ ಕೇಂದ್ರದ ಚುನಾವಣಾ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಲಾಯಿತು. ನಾಮಪತ್ರ ಸಲ್ಲಿಕೆ ವೇಳೆ ಘೋಷಣೆಗಳು ಮುಗಿಲು ಮುಟ್ಟಿದ್ದು, ಬಿಜೆಪಿ ಬಲ ಎದ್ದು ಕಾಣಿಸಿತ್ತು.