Monday, January 30, 2023

Latest Posts

ಸೇನೆಯ ಮೇಲೆ ಸಂಪೂರ್ಣ ನಂಬಿಕೆ ಇದೆ, ದಿಗ್ವಿಜಯ ಸಿಂಗ್ ಹೇಳಿಕೆ ಒಪ್ಪುವುದಿಲ್ಲ: ರಾಹುಲ್ ಗಾಂಧಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕಾಂಗ್ರೆಸ್ ನಾಯಕ ದಿಗ್ವಿಜಯ ಸಿಂಗ್(Digvijaya Singh) ನಿನ್ನೆ ಸರ್ಜಿಕಲ್ ಸ್ಟ್ರೈಕ್ ಕುರಿತು ನೀಡಿರುವ ಹೇಳಿಕೆಯನ್ನು ಕಾಂಗ್ರೆಸ್ ಪಕ್ಷ ಒಪ್ಪುವುದಿಲ್ಲ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

ನಮ್ಮ ಸೇನೆ ಏನೇ ಮಾಡಿದರೂ ಅದಕ್ಕೆ ಪುರಾವೆ ಬೇಕಿಲ್ಲ. ದಿಗ್ವಿಜಯ್ ಸಿಂಗ್ ಹೇಳಿರುವುದು ಅವರ ವೈಯಕ್ತಿಕ ಅಭಿಪ್ರಾಯ. ಕಾಂಗ್ರೆಸ್ ಮತ್ತು ನಾನು ಅದನ್ನು ಒಪ್ಪುವುದಿಲ್ಲ. ಸೇನೆಯ ಮೇಲೆ ನಮಗೆ ಸಂಪೂರ್ಣ ನಂಬಿಕೆ ಇದೆ ಎಂದಿದ್ದಾರೆ.

ಈ ಮೂಲಕ ದಿಗ್ವಿಜಯ ಸಿಂಗ್ ಹೇಳಿಕೆಯಿಂದ ಕಾಂಗ್ರೆಸ್ ಅಂತರ ಕಾಪಾಡಿಕೊಂಡಿದ್ದು, ಇದರ ಜೊತೆಗೆ ವಿವಿಧ ಕಡೆಯಿಂದ ಟೀಕೆಗಳು ವ್ಯಕ್ತವಾಗಿದ್ದವು.

ಪುಲ್ವಾಮಾ ಭಯೋತ್ಪಾದನೆಯ ಕೇಂದ್ರವಾಗಿದ್ದು, ಪ್ರತಿ ಕಾರನ್ನು ಅಲ್ಲಿ ತಪಾಸಣೆ ಮಾಡಲಾಗುತ್ತದೆ. ರಾಂಗ್ ಸೈಡ್‌ನಿಂದ ಸ್ಕಾರ್ಪಿಯೋ ಕಾರು ಬಂದಿದೆ, ಏಕೆ ತಪಾಸಣೆ ಮಾಡಲಿಲ್ಲ? ನಂತರ ಡಿಕ್ಕಿ ಹೊಡೆದು ನಮ್ಮ 40 ಜವಾನರು ಸಾವನ್ನಪ್ಪಿದ್ದಾರೆ. ಇಲ್ಲಿಯವರೆಗೆ ಸರ್ಕಾರ ಮಾಹಿತಿ ನೀಡಿಲ್ಲ. ಸರ್ಜಿಕಲ್ ಸ್ಟ್ರೈಕ್‌ಗಳ ಬಗ್ಗೆ ಮಾತನಾಡುತ್ತಾರೆ ನಾವು ಇಷ್ಟು ಜನರನ್ನು ಕೊಂದಿದ್ದೇವೆ. ಆದರೆ ಯಾವುದೇ ಪುರಾವೆಗಳಿಲ್ಲ. ಅವರು ಸುಳ್ಳಿನ ಕಂತೆ ಕಟ್ಟಿಕೊಂಡು ಆಡಳಿತ ನಡೆಸುತ್ತಿದ್ದಾರೆ ಎಂದು ದಿಗ್ವಿಜಯ ಸಿಂಗ್ ಹೇಳಿದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!