ಹೊಸದಿಗಂತ ಡಿಜಿಟಲ್ ಡೆಸ್ಕ್:
ಎಸ್‌ಐಟಿ ತನಿಖೆ ಮೇಲೆ ಸಂಪೂರ್ಣ ನಂಬಿಕೆ ಇದೆ, ಅವರು ಕೂಡ ನಮ್ಮ ಪೊಲೀಸರೇ, ನಮ್ಮ ಪೊಲೀಸರ ಮೇಲೆ ನನಗೆ ನಂಬಿಕೆಯಿಲ್ಲ ಅಂದ್ರೆ ಹೇಗೆ? ನಾನು ನಂಬುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಕಾನೂನು ಪ್ರಕಾರ ಎಸ್ ಐಟಿ ರಚನೆ ಮಾಡಿದ್ದೇವೆ, ನಮ್ಮ ಪೊಲೀಸರ ಮೇಲೆ ನನಗೆ ನಂಬಿಕೆಯಿದೆ ಅವರು ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ಹಗರಣ ತನಿಖೆ ಪ್ರಕರಣದಲ್ಲಿ ಸೂಕ್ತ ತನಿಖೆ ಮಾಡಿ ವರದಿ ನೀಡುತ್ತಾರೆ ಎಂದು ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ.
ಈ ಹಿಂದೆ ಸಿಬಿಐಗೆ ನೀಡಿದ್ದ ಡಿ ಕೆ ರವಿ ಕೇಸು ಏನಾಯಿತು, ಇಂದು ಸಿಬಿಐ ತನಿಖೆಗೆ ವಹಿಸಿ ಎಂದು ಒತ್ತಾಯ ಮಾಡುವವರು ಹಿಂದೆ ಟೀಕೆ ಮಾಡಿದ್ದರು. ನನಗೆ ಎಸ್ ಐಟಿ ತನಿಖೆ ಮೇಲೆ ಸಂಪೂರ್ಣ ನಂಬಿಕೆಯಿದೆ, ಅವರು ಸೂಕ್ತ ತನಿಖೆ ಮಾಡಿ ವರದಿ ಸಲ್ಲಿಸುತ್ತಾರೆ ಎಂದರು.