ಉಚಿತ ವಿದ್ಯುತ್ ಗೆ ಅರ್ಜಿ ಹಾಕಿಲ್ವಾ? ಹಾಗಿದ್ರೆ ಬೇಗ ನೋಂದಣಿ ಮಾಡಿ, ಜುಲೈ 27 ಲಾಸ್ಟ್ ಡೇಟ್ ಅಂತೆ!

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ರಾಜ್ಯ ಕಾಂಗ್ರೆಸ್ ಸರಕಾರದ ಗ್ಯಾರಂಟಿಗಳಲ್ಲಿ ಒಂದಾದ ಗೃಹಜ್ಯೋತಿ ಯೋಜನೆಯಡಿ ಉಚಿತ ವಿದ್ಯುತ್ ಗೆ ಅರ್ಜಿ ಸಲ್ಲಿಸಲು ಜುಲೈ 27 ಕೊನೆಯ ದಿನಾಂಕವಾಗಿದೆ ಎಂದು ಇಂಧನ ಸಚಿವ ಕೆ.ಜೆ ಜಾರ್ಜ್ ಹೇಳಿದರು.

ವಿಧಾನಸೌಧದಲ್ಲಿ ಮಾತನಾಡಿದ ಅವರು ‘ಗೃಹಜ್ಯೋತಿ ನೋಂದಣಿಗೆ ಕೊನೆ ದಿನಾಂಕ ಇಲ್ಲವಾದರೂ ಆಗಸ್ಟ್ ತಿಂಗಳ ಮೊದಲ ವಾರದಲ್ಲಿ ಬರುವ ಜುಲೈ ತಿಂಗಳ ವಿದ್ಯುತ್ ಬಳಕೆಯ ಬಿಲ್ ಝೀರೋ ಬರಬೇಕಾದರೆ ಅದಕ್ಕಿಂತ ಮೊದಲು ನೋಂದಣಿ ಮಾಡಿಕೊಳ್ಳಬೇಕು.ಜುಲೈ 26 ಅಥವಾ 27 ರ ಒಳಗೆ ಅಂತಿಮ ಗಡುವು ನೀಡಲಾಗಿದೆ. ಈ ದಿನಾಂಕದೊಳಗೆ ನೀವು ನೋಂದಣಿ ಮಾಡದಿದ್ದರೆ ಎಂದಿನಂತೆ ರೆಗ್ಯೂಲರ್ ಬಿಲ್ ಬರುತ್ತದೆ. ಆದ್ದರಿಂದ ಜುಲೈ 27 ರೊಳಗೆ ಅರ್ಜಿ ಸಲ್ಲಿಸಿ ಎಂದು ಕೆ.ಜೆ ಜಾರ್ಜ್ ಹೇಳಿದರು.

200 ಯೂನಿಟ್ ವರೆಗೆ ಉಚಿತ ವಿದ್ಯುತ್ ನೀಡುವ ‘ಗೃಹಜ್ಯೋತಿ’ ಯೋಜನೆಯನ್ನು ಈಗಾಗಲೇ ಜಾರಿಗೊಳಿಸಿದ್ದು, ಅರ್ಜಿ ಸ್ವೀಕಾರ ಆರಂಭವಾಗಿದೆ.ಗೃಹ ಜ್ಯೋತಿ ಯೋಜನೆಗೆ ನೋಂದಣಿ ಮಾಡಿಕೊಂಡವರು ತಮ್ಮ ಅರ್ಜಿಯ ಸ್ಥಿತಿಗತಿ ಪರಿಶೀಲಿಸುವ ಸಲುವಾಗಿ ಇಂಧನ ಇಲಾಖೆ, ಅಂತರ್ಜಾಲ ಲಿಂಕ್ ಬಿಡುಗಡೆ ಮಾಡಿದ್ದು ಇದರ ಮಾಹಿತಿ ಇಲ್ಲಿದೆ.

ಈಗಾಗಲೇ ಅರ್ಜಿ ಸಲ್ಲಿಸಿರುವ ಗ್ರಾಹಕರು ಸೇವಾ ಸಿಂಧು ಪೋರ್ಟಲ್ https://sevasindhu.karnataka.gov.in/statucTrack/Track_Status ಮೂಲಕ ಪರಿಶೀಲಿಸಿಕೊಳ್ಳಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!