ಹೊಸದಿಗಂತ ಡಿಜಿಟಲ್ ಡೆಸ್ಕ್:
ವಿಧಾನ ಸಭೆಯಲ್ಲಿ ಇಂದು ಕಲಾಪದ ವೇಳೆ ಮಾಜಿ ಸಚಿವ ಹೆಚ್ ಡಿ ರೇವಣ್ಣ ವಿಧಾನಸೌಧಕ್ಕೆ ಕೊಬ್ಬರಿ ತಂದಿದ್ದಾರೆ.
ಇತ್ತ ಇದನ್ನು ಕಂಡ ಸಿಎಂ ಸಿದ್ದರಾಮಯ್ಯ ,ರೀ ರೇವಣ್ಣ ಈ ಬಾರಿ ಕೊಬ್ಬರಿ ಹಿಡ್ಕೊಂಡು ಬಂದಿದ್ದೀರಾ..? ಯಾಕೆ ನಿಂಬೆಹಣ್ಣು ತಂದಿಲ್ವಾ..? ಎಂದು ಕಾಲೆಳೆದಿದ್ದಾರೆ. ಸಿದ್ದರಾಮಯ್ಯ ಕಾಮಿಡಿಗೆ ಸದನದಲ್ಲಿ ಎಲ್ಲರೂ ನಕ್ಕಿದ್ದಾರೆ.
ಬೆಲೆ ಕುಸಿತದ ಹಿನ್ನಲೆಯಲ್ಲಿ ಕಂಗಾಲಾಗಿದ್ದ ಕೊಬ್ಬರಿ ಬೆಳೆಗಾರರ ನೆರವಿಗೆ ಕರ್ನಾಟಕ ಸರ್ಕಾರ ಧಾವಿಸಿದೆ. ಕೇಂದ್ರ ಸರ್ಕಾರದ ಕನಿಷ್ಠ ಬೆಂಬಲ ಬೆಲೆಯ ಜೊತೆಗೆ ರಾಜ್ಯ ಸರ್ಕಾರವು ಪ್ರೋತ್ಸಾಹಧನವನ್ನು ಘೋಷಣೆ ಮಾಡಿದೆ. ಬುಧವಾರದಿಂದಲೇ ಜಾರಿಗೆ ಬರುವಂತೆ ಕ್ವಿಂಟಾಲ್ ಕೊಬ್ಬರಿಗೆ 1,250 ರೂ. ಪ್ರೋತ್ಸಾಹಧನವನ್ನು ಘೋಷಣೆ ಮಾಡಲಾಗಿದೆ. ದರ ಕುಸಿತದಿಂದ ಸಂಕಷ್ಟಕ್ಕೆ ಸಿಲುಕಿರುವ ರೈತರ ನೆರವಿಗೆ ಸರ್ಕಾರ ಬರಬೇಕು ಎಂದು ವಿಪಕ್ಷಗಳು ಸರ್ಕಾರವನ್ನು ಒತ್ತಾಯಿಸಿತ್ತು.