6 ತಿಂಗಳಿಂದ ಅಪ್ಪ-ಅಮ್ಮನ ಮುಖ ನೋಡಿಲ್ಲ: ಕೋರ್ಟ್‌ ಕಟಕಟೆಯಲ್ಲಿ ಪ್ರಜ್ವಲ್‌ ರೇವಣ್ಣ ಕಣ್ಣೀರು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಹಾಸನ ಜಿಲ್ಲೆಗೆ ಸಾಕಷ್ಟು ಕೆಲಸ ಮಾಡಿದ್ದೇನೆ, ನಾನು ಮಹಿಳೆಯ ಅತ್ಯಾಚಾರ ಮಾಡಿದ್ರೆ ಆಕೆಯ ಸಹೋದರಿ ನಮ್ಮ ಮನೇಲಿ ಕೆಲಸ ಮಾಡ್ತಿದ್ರ? ಕಳೆದ 6 ತಿಂಗಳಿಂದ ಅಪ್ಪ-ಅಮ್ಮನ ಮುಖವನ್ನೇ ನೋಡಿಲ್ಲ. ಶಿಕ್ಷೆ ನೀಡುವಾಗ ನನ್ನ ಕುಟುಂಬವನ್ನ ಪರಿಗಣಿಸಿ ಎಂದು ಕೋರ್ಟ್‌ ಕಟಕಟೆಯಲ್ಲಿ ಪ್ರಜ್ವಲ್‌ ರೇವಣ್ಣ ಕಣ್ಣೀರಾಕಿದ್ದಾರೆ.

ಕೆ.ಆರ್ ನಗರದಲ್ಲಿ ಮನೆ ಕೆಲಸದಾಕೆಯ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ದೋಷಿ ಎಂದು ತೀರ್ಪು ನೀಡಿದ್ದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಇಂದು ಶಿಕ್ಷೆ ಪ್ರಮಾಣ ಪ್ರಕಟಿಸಲಿದೆ.

ಶಿಕ್ಷೆ ಪ್ರಮಾಣ ಕುರಿತು ಸರ್ಕಾರಿ ಪರ ವಕೀಲರಾಗಿ ಎನ್. ಜಗದೀಶ್, ಅಶೋಕ್ ನಾಯಕ್ ಹಾಗೂ ಪ್ರಜ್ವಲ್ ರೇವಣ್ಣ ಪರ ವಕೀಲ ಅರುಣ್ ಜಿ ಅವರು ವಾದ ಪ್ರತಿವಾದ ಮಂಡಿಸಿದರು. ವಾದ ಪ್ರತಿವಾದ ಪೂರ್ಣಗೊಂಡಿದ್ದು, ಮಧ್ಯಾಹ್ನ 2:45ಕ್ಕೆ ನ್ಯಾ. ಗಜಾನನ ಭಟ್‌ ಅವರ ಪೀಠ ಶಿಕ್ಷೆ ಪ್ರಮಾಣವನ್ನು ಪ್ರಕಟಿಸಲಿದೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!