ಹೊಸದಿಗಂತ ಡಿಜಿಟಲ್ ಡೆಸ್ಕ್:
ಹಾವೇರಿ ಜಿಲ್ಲೆಯ ಗುಂಡೇನಹಳ್ಳಿ ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಸರಕಾರ ಕೂಡಲೇ ಪರಿಹಾರ ನೀಡಲು ಮುಂದಾಗಬೇಕು ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಆಗ್ರಹಿಸಿದರು.
ಈ ಭೀಕರ ದುರಂತದಲ್ಲಿ 13 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ ಎಂದು ತಿಳಿದ ಸಚಿವ ಜೋಶಿ ತೀವ್ರ ದುಃಖ ವ್ಯಕ್ತಪಡಿಸಿದರು.
ಭಗವಂತ ಮೃತರ ಆತ್ಮಕ್ಕೆ ಚಿರಶಾಂತಿ ನೀಡಲಿ ಹಾಗೂ ಅವರ ಕುಟುಂಬ ಸದಸ್ಯರಿಗೆ ನೋವನ್ನು ತಡೆದುಕೊಳ್ಳುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸಿದರು.