ಹೊಸದಿಗಂತ ಡಿಜಿಟಲ್ ಡೆಸ್ಕ್:
ಹಾವೇರಿ ನಗರದಿಂದ 7ಕೀಮಿ ದೂರದಲ್ಲಿ ಬೆಳಗಿನ ಜಾವ ನಡೆದ ಭೀಕರ ರಸ್ತೆ ಅಪಘಾತದಲ್ಲಿ 13 ಜನ ಸ್ಥಳದಲ್ಲೇ ಮೃತಪಟ್ಟು ನಾಲ್ಕು ಜನ ತೀವ್ರವಾಗಿ ಗಾಯಗೊಂಡ ಭೀಕರ ಘಟನೆ ನಡೆದಿದೆ.
ರಸ್ತೆ ಬದಿ ನಿಂತಿದ್ದ ಲಾರಿಗೆ ಟೆಂಪೋ ಟ್ರಾವೆಲ್ಲರ್ ಡಿಕ್ಕಿ ಹೊಡೆದ ಪರಿಣಾಮ ಹದಿಮೂರು ಜನರು ಮೃತಪಟ್ಟಿದ್ದಾರೆ. ಹಾವೇರಿ ಜಿಲ್ಲೆ ಬ್ಯಾಡಗಿ ತಾಲೂಕಿನ ಗುಂಡೇನಹಳ್ಳಿ ಕ್ರಾಸ್ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಅವಘಡ ನಡೆದಿದೆ.
ಇನ್ನು ಈ ಘಟನೆ ಕುರಿತು ಸಂಸದ ಬಸವರಾಜ ಬೊಮ್ಮಾಯಿ ಅವರು ಸಂತಾಪ ಸೂಚಿಸಿದ್ದಾರೆ, ಇಂದು ಬೆಳಗಿನ ಜಾವ ಹಾವೇರಿ ಜಿಲ್ಲೆ ಬ್ಯಾಡಗಿ ತಾಲೂಕಿನ ಗುಂಡೇನಳ್ಳಿ ಕ್ರಾಸ್ ಬಳಿ ನಡೆದ ಭೀಕರ ಅಪಘಾತದಲ್ಲಿ 13 ಜನರು ಸಾವಿಗೀಡಾಗಿರುವ ಸುದ್ದಿ ಕೇಳಿ ಆಘಾತವಾಗಿದೆ. ದೇವರು ಮೃತರ ಆತ್ಮಕ್ಕೆ ಶಾಂತಿ ನೀಡಲಿ, ಅವರ ಅಗಲಿಕೆಯ ದುಖವನ್ನು ಭರಿಸುವ ಶಕ್ತಿಯನ್ನು ಅವರ ಕುಟುಂಬಸ್ಥರಿಗೆ ಭಗವಂತ ನೀಡಲಿ ಎಂದು ಪ್ರಾರ್ಥಿಸುತ್ತೇನೆ. ರಾಜ್ಯ ಸರ್ಕಾರ ಮೃತರ ಕುಟುಂಬಗಳಿಗೆ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ಸೂಕ್ತ ಪರಿಹಾರ ನೀಡಬೇಕು ಹಾಗೂ ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ಒದಗಿಸಬೇಕು ಎಂದು ಆಗ್ರಹಿಸಿದ್ದಾರೆ.