January21, 2026
Wednesday, January 21, 2026
spot_img

ಹಾವೇರಿ ಜಿಲ್ಲಾಧಿಕಾರಿ ನಡೆಗೆ ಶ್ಲಾಘನೆ, ಜಾತ್ರೆಯಲ್ಲಿ ಪ್ರಾಣಿ-ಪಕ್ಷಿ ಬಲಿ ನಿಷೇಧ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಹಾವೇರಿ ತಾಲೂಕಿನ ಹಾವನೂರು ಗ್ರಾಮದಲ್ಲಿ ಜನವರಿ 23 ರಿಂದ ಒಂದುವಾರ ಗ್ರಾಮದೇವತೆ ಶ್ರೀ ದ್ಯಾಮವ್ವದೇವಿ ಜಾತ್ರೆ ನಡೆಯಲಿದೆ. ಈ ಸಮಯದಲ್ಲಿ ದೇವಸ್ಥಾನದ ಆವರಣ ಹಾಗೂ ಗ್ರಾಮದ ವ್ಯಾಪ್ತಿಯಲ್ಲಿ ಪ್ರಾಣಿ – ಪಕ್ಷಿ ಬಲಿಯನ್ನು ನಿಷೇಧಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಡಾ. ವಿಜಯಮಹಾಂತೇಶ ಬಿ ದಾನಮ್ಮನವರ ಆದೇಶ ಹೊರಡಿಸಿದ್ದಾರೆ.

ಭಕ್ತಾಧಿಗಳು, ಸಾರ್ವಜನಿಕರು ದೇವರ ಹೆಸರಿನಲ್ಲಿ ಯಾವುದೇ ರೀತಿಯ ಪ್ರಾಣಿ – ಪಕ್ಷಿ ಬಲಿ ನೀಡುವುದನ್ನು ನಿಷೇಧಸಲಾಗಿದೆ. ಕರ್ನಾಟಕ ಪ್ರಾಣಿ ಬಲಿ ನಿಷೇಧ ಕಾಯ್ದೆ 1959 ಮತ್ತು ನಿಯಮಗಳು 1963 ರ ಪ್ರಕಾರ ಹಾಗೂ ಗ್ರಾಮದ ವ್ಯಾಪ್ತಿಯಲ್ಲಿ ನೈರ್ಮಲ್ಯ ಕಾಪಾಡುವುದು ಮತ್ತು ಮುಂಜಾಗೃತ ಕ್ರಮವಾಗಿ ಕಾನೂನು ಸುವ್ಯವಸ್ಥೆ ಕಾಪಾಡಲು ಮತ್ತು ಸಾರ್ವಜನಿಕ ಹಿತ ದೃಷ್ಟಿಯಿಂದ ಪ್ರಾಣಿ – ಪಕ್ಷಿ ಬಲಿಯನ್ನು ನಿಷೇಧಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಜಾತ್ರೆಯಲ್ಲಿ ಪ್ರಾಣಿಬಲಿ ನಿಷೇಧಿಸುವ ಕುರಿತು ವಿಶ್ವ ಪ್ರಾಣಿ ಕಲ್ಯಾಣ ಮಂಡಳಿ ಅಧ್ಯಕ್ಷ ಶ್ರೀ ದಯಾನಂದ ಸ್ವಾಮೀಜಿ ಕೋರಿದ್ದರು. ಈ ಹಿನ್ನೆಲೆಯಲ್ಲಿ ಜಾತ್ರೆಯಲ್ಲಿ ಪ್ರಾಣಿ ಬಲಿ ನಿಷೇಧಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.

Must Read