ಹಾವೇರಿ ಪಟಾಕಿ ಗೋದಾಮಿನಲ್ಲಿ ಬೆಂಕಿ: ಮೃತರ ಕುಟುಂಬಸ್ಥರಿಗೆ ಪರಿಹಾರ ಘೋಷಿಸಿದ ಸಿಎಂ ಸಿದ್ದರಾಮಯ್ಯ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌  

ಹಾವೇರಿ ಸಾತೇನಹಳ್ಳಿ ಬಳಿ ಭೂಮಿಕಾ ಪಟಾಕಿ ಗೋದಾಮಿನಲ್ಲಿ ಆಕಸ್ಮಿಕವಾಗಿ ಬೆಂಕಿ ಹತ್ತಿಕೊಂಡು ಅಪಾರ ಪ್ರಮಾಣ ವಸ್ತುಗಳು ಬೆಂಕಿಗಾಹುತಿಯಾಗಿದ್ದು, ಮೂವರು ಸಾವನ್ನಪ್ಪಿದ್ದಾರೆ.

ಇದೀಗ ಸಿಎಂ ಸಿದ್ದರಾಮಯ್ಯ (Siddaramaiah) ಅವರು ಮೃತರ ಕುಟುಂಬಸ್ಥರಿಗೆ ತಲಾ ಐದು ಲಕ್ಷ ರೂ. ಪರಿಹಾರ ಘೋಷಣೆ ಮಾಡಿದ್ದಾರೆ.

ಪಟಾಕಿ ಅವಘಡದ ಬಗ್ಗೆ ಮಾಹಿತಿ ಪಡೆದುಕೊಂಡ ಸಿಎಂ ಸಿದ್ದರಾಮಯ್ಯ ಅವರು ಕೂಡಲೆ ಸ್ಥಳಕ್ಕೆ ಹೊಗುವಂತೆ ಸಚಿವ ಶಿವಾನಂದ ಪಾಟೀಲ್ ಅವರಿಗೆ ಸೂಚನೆ ನೀಡಿದ್ದಾರೆ. ಮುಖ್ಯಮಂತ್ರಿ ಸೂಚನೆ ಮೆರೆಗೆ ನಿಗದಿಯಾಗಿದ್ದ ಕಾರ್ಯಕ್ರಮ ರದ್ದುಗೊಳಿಸಿದ ಶಿವಾನಂದ ಪಾಟೀಲ್, ಬೆಂಗಳೂರಿನಿಂದ ಹಾವೇರಿಗೆ ತೆರಳಿದ್ದಾರೆ. ನಾಳೆ ಬೆಳಿಗ್ಗೆ ಘಟನಾ ಸ್ಥಳಕ್ಕೆ ಭೇಟಿ ನೀಡಲಿದ್ದಾರೆ.

 

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!