ಹೊಸದಿಗಂತ ಡಿಜಿಟಲ್ ಡೆಸ್ಕ್:
ಹಾವೇರಿ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊನೆಗೂ ಪೊಲೀಸರು 19 ಆರೋಪಿಗಳ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಿದ್ದಾರೆ.
ಗ್ಯಾಂಗ್‌ರೇಪ್ ಪ್ರಕರಣ ರಾಜ್ಯಾದ್ಯಂತ ಸಂಚಲನ ಸೃಷ್ಟಿಸಿತ್ತು. ಅತ್ಯಾಚಾರ ನಡೆದು 58 ದಿನಗಳ ಬಳಿಕ ಚಾರ್ಜ್‌ಶೀಟ್ ಸಲ್ಲಿಕೆ ಮಾಡಲಾಗಿದೆ.
ಕಳೆದ ಜನವರಿ 8 ರಂದು ಹಾನಗಲ್ ಬಳಿ ಶಿರಸಿ ಮೂಲದ ಮುಸ್ಲಿಂ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದ್ದು, ಏಳು ಪ್ರಮುಖ ಆರೋಪಿಗಳನ್ನು ಸೇರಿಸಿ ಒಟ್ಟಾರೆ 19 ಮಂದಿಯ ಹೆಸರು ಚಾರ್ಜ್‌ಶೀಟ್‌ನಲ್ಲಿದೆ.