ಹೊಸದಿಗಂತ ಡಿಜಿಟಲ್ ಡೆಸ್ಕ್:
ವಿವಿಧ ದೇಶಗಳು ಸಾರ್ವಜನಿಕ ಸ್ಥಳಗಳಲ್ಲಿ ಜನರ ವರ್ತನೆ ಕುರಿತು ಹೆಚ್ಚಿನ ನಿಗಾ ವಹಿಸುತ್ತವೆ. ಕಠಿಣ ನಿಯಮಗಳ ಮೂಲಕ ಶಿಸ್ತು ಕಾಪಾಡುತ್ತವೆ. ಇದೇ ರೀತಿ ಸ್ಪೇನ್ ದೇಶದ ನಗರವೊಂದರಲ್ಲಿ ವಿಚಿತ್ರ ನಿಯಮವೊಂದನ್ನು ಜಾರಿಗೆ ತರಲಾಗಿದೆ.
ಸಮುದ್ರದಲ್ಲಿ ಈಜಾಡುವವರು, ಮೋಜು-ಮಸ್ತಿ ಮಾಡುವವರು ನೀರಿನಲ್ಲೇ ಮೂತ್ರ ವಿಸರ್ಜನೆ ಮಾಡಿದರೆ 67 ಸಾವಿರ ರೂ.ನಿಂದ 1 ಲಕ್ಷ ರೂ. ದಂಡ ವಿಧಿಸುವುದಾಗಿ ಅಧಿಕಾರಿಗಳು ಆದೇಶ ಹೊರಡಿಸಿದ್ದಾರೆ. ಈ ಸುದ್ದಿ ಈಗ ಭಾರಿ ಚರ್ಚೆಗೆ ಗ್ರಾಸವಾಗಿದೆ.
ಸ್ಪೇನ್‌ನ ಮಾರ್ಬೆಲ್ಲಾ ಸಿಟಿಯಲ್ಲಿ ಹೊಸ ನಿಯಮ ಜಾರಿಗೆ ತರಲಾಗಿದೆ. ಸುಂದರ ಬೀಚ್‌ಗಳನ್ನು ಹೊಂದಿರುವ ಈ ಪ್ರವಾಸಿ ತಾಣದಲ್ಲಿ ಪ್ರವಾಸಿಗರು ಕಿಕ್ಕಿರಿದು ತುಂಬುತ್ತಾರೆ. ವೀಕೆಂಡ್‌ಗಳಲ್ಲಿ ಕಾಲಿಡಲು ಜಾಗವಿಲ್ಲದಷ್ಟು ಪ್ರವಾಸಿಗರು ತುಂಬುತ್ತಾರೆ. ಆದರೆ ಬೀಚ್‌ನಲ್ಲಿ ಆಟವಾಡುತ್ತಾ ಕಾಲಕಳೆಯುವ ಪ್ರವಾಸಿಗರು, ಸಮುದ್ರ ನೀರಿನಲ್ಲಿ ಮೂತ್ರ ವಿಸರ್ಜನೆ ಮಾಡುತ್ತಾರೆ. ಇದರಿಂದ ನೀರಿನ ಶುಚಿತ್ವ, ಹೈಜೀನ್ ಸಮಸ್ಯೆಯಾಗುತ್ತಿದೆ. ಹಲವರು ಪ್ರವಾಸಿಗರು ಈ ಕುರಿತು ದೂರು ನೀಡಿದ್ದಾರೆ. ಹೀಗಾಗಿ ಮಾರ್ಬೆಲ್ಲಾ ನಗರ ಕಠಿಣ ನಿಯಮ ಜಾರಿಗೊಳಿಸಿದೆ.
ಆದರೆ ಈ ನಿಯಮ ಜಾರಿಯಾಗುತ್ತಿದ್ದಂತೆ ಸೋಶಿಯಲ್ ಮೀಡಿಯಾದಲ್ಲಿ ಭಾರಿ ಚರ್ಚೆಯಾಗುತ್ತಿದೆ. ಕಿಕ್ಕಿರಿದು ಸೇರಿದ ಜನಸಂದಣಿಯಲ್ಲಿ ಸಮುದ್ರದ ನೀರಿನಲ್ಲಿ ಯಾರು ಮೂತ್ರ ವಿಸರ್ಜನೆ ಮಾಡುತ್ತಾರೆ ಅನ್ನೋದು ಪತ್ತೆ ಹಚ್ಚುವುದು ಹೇಗೆ? ಬೀಚ್ ನೀರಿನೊಳಗೆ ನಿಂತು ಮೂತ್ರ ವಿಸರ್ಜನೆ ಮಾಡಿದರೆ ಪತ್ತೆ ಹಚ್ಚುವುದು ಹೇಗೆ? ಪ್ರತಿಯೊಬ್ಬರ ಮೇಲೆ ನಿಗಾ ಇಡಲು ಸಾಧ್ಯವಿಲ್ಲ. ಹೀಗಾಗಿ ಈ ನಿಯಮ ಜಾರಿಯಲ್ಲಿ ಲೋಪಗಳಿವೆ ಎಂದು ಹಲವರು ಅಭಿಪ್ರಾಯ ಪಟ್ಟಿದ್ದಾರೆ.
ಮಾರ್ಬೆಲ್ಲಾ ಸಿಟಿ ಆಡಳಿತ ತಂದಿರುವ ಹೊಸ ನಿಯಮ ಇದೀಗ ಕರಾವಳಿ ಸಿಬ್ಬಂದಿಗಳಿಗೂ ತಲೆನೋವಾಗಿದೆ. ಯಾರು ನೀರಿನಲ್ಲಿ ಆಟವಾಡುತ್ತಿದ್ದಾರೆ? ಯಾರು ಮೂತ್ರ ವಿಸರ್ಜನೆ ಮಾಡುತ್ತಿದ್ದಾರೆ ಅನ್ನೋದು ಪತ್ತೆ ಹಚ್ಚುವುದು ಸುಲಭದ ಮಾತಲ್ಲ. ಹೀಗಾಗಿ ಇದು ಕಷ್ಟ ಅನ್ನೋ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಇತ್ತ ಪ್ರವಾಸಿಗರಲ್ಲಿ ಮಿಶ್ರ ಅಭಿಪ್ರಾಯಗಳು ವ್ಯಕ್ತವಾಗಿದೆ. ಕೆಲವರು ಈ ನಿಯಮ ಜಾರಿ ಸಾಧ್ಯವಿಲ್ಲ ಎಂದರೆ ಮತ್ತೆ ಕೆಲವರು ಜಾರಿ ಮಾಡಿದ ಬಳಿಕ ಎದುರಾಗುವ ಸವಾಲು ಆಧರಿಸಿ ತಿದ್ದುಪಡಿ ಮಾಡಬೇಕು ಎಂದು ಸಲಹೆ ನೀಡಿದ್ದಾರೆ. ಶುಚಿತ್ವಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು. ನಿಯಮಗಳ್ನು ಪ್ರವಾಸಿಗರು ಪಾಲಿಸಬೇಕು ಎಂದು ಹಲವರು ಸೂಚಿಸಿದ್ದಾರೆ.