ಹೊಸದಿಗಂತ ಡಿಜಿಟಲ್ ಡೆಸ್ಕ್:
ಎರಡೂ ಬಾರಿ ನಾನು ಬಯಸದಿದ್ದರೂ, ನಾನು ಪಕ್ಷದ ಆದೇಶದ ಮೇರೆಗೆ ಚುನಾವಣೆಯಲ್ಲಿ ಸ್ಪರ್ದಿಸಿದ್ದೆ. ಪದೇ ಪದೇ ಈ ರೀತಿ ಒತ್ತಡ ಹೇರುವುದು ಸರಿಯಲ್ಲ ಎಂದು ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.
ಮಂಗಳೂರಿನಲ್ಲಿ ಮಾತನಾಡಿರುವ ಅವರು, ಕೆಲವು ಸಚಿವರು ಕೆಲವು ಕ್ಷೇತ್ರಗಳಿಂದ ನಾಮಪತ್ರ ಸಲ್ಲಿಸಿದರೆ ಅನುಕೂಲವಾಗುತ್ತದೆ ಎಂದು ಕಾರ್ಯಕರ್ತರು, ಮುಖಂಡರು ಹೇಳಿದ್ದಾರೆ. ಯಾರು ಸ್ಪರ್ಧಿಸಬೇಕೆಂದು ಪಕ್ಷದ ನಾಯಕರು ನಿರ್ಧರಿಸುತ್ತಾರೆ. ಚುನಾವಣೆಗೆ ಸ್ಪರ್ಧಿಸಬೇಕೋ ಬೇಡವೋ ಎಂಬುದನ್ನು ನಿರ್ಧರಿಸುವಲ್ಲಿ ಸಿಎಂ ಕೂಡ ಪ್ರಮುಖ ಪಾತ್ರ ವಹಿಸುತ್ತಾರೆ ಎಂದು ತಿಳಿಸಿದರು.
ನಾನು ಎರಡು ಬಾರಿ ಲೋಕಸಭೆಗೆ ಸ್ಪರ್ಧಿಸಿದ್ದೇನೆ. 2009ರಲ್ಲಿ ಪ್ರಥಮ ಬಾರಿಗೆ ಶಾಸಕನಾಗಿದ್ದರೂ ಪಕ್ಷದ ಸೂಚನೆಯಂತೆ ಸ್ಪರ್ಧಿಸಿದ್ದೆ. ಪಕ್ಷದ ಸೂಚನೆಯಂತೆ 2019ರ ಚುನಾವಣೆಯಲ್ಲಿ ಕೊನೆಯ ಕ್ಷಣದಲ್ಲಿಯೂ ಭಾಗವಹಿಸಿದ್ದೇನೆ. ಎರಡು ಬಾರಿ ಚುನಾವಣೆಯಲ್ಲಿ ಸೋತಿದ್ದೇನೆ. ಎರಡು ಬಾರಿ ಚುನಾವಣೆಗೆ ಸ್ಪರ್ಧಿಸಿ ಪಕ್ಷಕ್ಕೆ ಕರ್ತವ್ಯ ನಿರ್ವಹಿಸಿದ್ದೇನೆ ಎಂದು ಹೇಳಿದ್ದಾರೆ.