March 17, 2026
Tuesday, March 17, 2026
spot_img

ಶಾಲೆಗಳ ಸುತ್ತಮುತ್ತ ಮಾಂಸದ ಅಂಗಡಿ ಇಡೋದು ಮಕ್ಕಳಲ್ಲಿ ಹಿಂಸಾತ್ಮಕ ಪ್ರವೃತ್ತಿ ಹೆಚ್ಚಿಸುತ್ತೆ: ವಿಜಯ್ ಕುಮಾರ್ ಸಿನ್ಹಾ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಧಾರ್ಮಿಕ ಹಾಗೂ ಶಿಕ್ಷಣ ಸಂಸ್ಥೆಗಳ ಸುತ್ತಮುತ್ತ ಮಾಂಸ, ಮೀನು ಮತ್ತು ಕೋಳಿ ಮಾರಾಟ ನಡೆಯುತ್ತಿರುವ ಅಂಗಡಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಬಿಹಾರ ಉಪಮುಖ್ಯಮಂತ್ರಿ ವಿಜಯ್ ಕುಮಾರ್ ಸಿನ್ಹಾ ತಿಳಿಸಿದ್ದಾರೆ.

ನಗರಾಭಿವೃದ್ಧಿ ಖಾತೆಯ ಜವಾಬ್ದಾರಿ ಹೊಂದಿರುವ ಅವರು, ಇತ್ತೀಚಿನ ಇಲಾಖಾ ಸಭೆಯಲ್ಲಿ ಸಂಬಂಧಿತ ನಿಯಮಗಳನ್ನು ಕಟ್ಟುನಿಟ್ಟಾಗಿ ಜಾರಿಗೆ ತರಲು ಸೂಚನೆ ನೀಡಿರುವುದಾಗಿ ಹೇಳಿದ್ದಾರೆ.

ಇದನ್ನೂ ಓದಿ:

ಶಾಲೆಗಳು ಮತ್ತು ಇತರ ಶಿಕ್ಷಣ ಸಂಸ್ಥೆಗಳ ಬಳಿ ಇಂತಹ ಅಂಗಡಿಗಳು ಇರುವುದರಿಂದ ಮಕ್ಕಳ ಮನೋಭಾವದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತದೆ. ಮಕ್ಕಳಲ್ಲಿ ಹಿಂಸಾತ್ಮಕ ಪ್ರವೃತ್ತಿಯನ್ನು ಉತ್ತೇಜಿಸುತ್ತದೆ ಎಂಬ ಅಭಿಪ್ರಾಯವನ್ನು ಅವರು ವ್ಯಕ್ತಪಡಿಸಿದರು. ಧಾರ್ಮಿಕ ಸ್ಥಳಗಳ ಸುತ್ತಮುತ್ತ ಓಪನ್ ಆಗಿ ಮಾಂಸ ಮಾರಾಟ ನಡೆಯುವುದು ಸಮಾಜದ ಸಾಂಸ್ಕೃತಿಕ ಸಂವೇದನೆಗಳಿಗೆ ಧಕ್ಕೆಯಾಗುತ್ತದೆ ಎಂದೂ ಹೇಳಿದರು.

ಆದರೆ, ಜನರ ಆಹಾರ ಆಯ್ಕೆ ಹಕ್ಕಿಗೆ ಸರ್ಕಾರ ವಿರೋಧಿಯಲ್ಲ ಎಂದು ಸ್ಪಷ್ಟಪಡಿಸಿದರು. ಸಾರ್ವಜನಿಕ ಸ್ಥಳಗಳಲ್ಲಿ, ವಿಶೇಷವಾಗಿ ಸೂಕ್ಷ್ಮ ಪ್ರದೇಶಗಳಲ್ಲಿ, ನಿಯಮ ಪಾಲನೆ ಅಗತ್ಯವೆಂಬುದನ್ನು ಅವರು ಒತ್ತಿಹೇಳಿದರು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !