ಹೊಸದಿಗಂತ ಡಿಜಿಟಲ್ ಡೆಸ್ಕ್:
ಹವಾಲಾ ದಂಧೆಗೆ ಸಂಬಂಧಿಸಿದಂತೆ ಹೈದರಾಬಾದ್‌ನ ಪಂಜಗುಟ್ಟದ ಪೊಲೀಸ್ ಅಧಿಕಾರಿಗಳು ಗುರುವಾರ ಸಂಜೆ ಇಬ್ಬರನ್ನು ಬಂಧಿಸಿದ್ದಾರೆ ಮತ್ತು 70 ಲಕ್ಷ ರೂಪಾಯಿ ಮೌಲ್ಯದ ಹವಾಲಾ ನಗದು ವಶಪಡಿಸಿಕೊಂಡಿದ್ದಾರೆ.
ಹೈದರಾಬಾದ್‌ನ ಬಂಜಾರಾ ಹಿಲ್ಸ್ ಪ್ರದೇಶದಲ್ಲಿ ಅಧಿಕಾರಿಗಳು ನಿತ್ಯ ವಾಹನ ತಪಾಸಣೆ ನಡೆಸುತ್ತಿದ್ದಾಗ ನಗದು ಪತ್ತೆಯಾಗಿದೆ. ಬಂಧಿತರು ಮಾರುತಿ ಬ್ರೀಝಾ ಕಾರಿನಲ್ಲಿಅನುಮಾನಾಸ್ಪದ ರೀತಿಯಲ್ಲಿ ಪೊಲೀಸ್ ಚೆಕ್‌ಪೋಸ್ಟ್ ಅನ್ನು ಹಾದು ಹೋಗಿದ್ದಾರೆ. ಅಧಿಕಾರಿಗಳು ಕಾರನ್ನು ನಿಲ್ಲಿಸಿ ನೋಡಿದಾಗ ಒಳಗೆ ಇಬ್ಬರು ವ್ಯಕ್ತಿಗಳು ಅಪಾರ ಪ್ರಮಾಣದ ಕರೆನ್ಸಿ ನೋಟುಗಳಿದ್ದ ಬ್ಯಾಗ್‌ನೊಂದಿಗೆ ಪತ್ತೆಯಾಗಿದ್ದಾರೆ.
ವಿಚಾರಣೆ ನಡೆಸಿದಾಗ, ಅವರು ತಮ್ಮನ್ನು 38 ವರ್ಷದ ಕಿಶನ್ ರಾವ್ ಮತ್ತು 26 ವರ್ಷದ ವೇಮುಲ ವಂಶಿ ಎಂದು ಬಹಿರಂಗಪಡಿಸಿದ್ದು ಇಬ್ಬರೂ ಹೈದರಾಬಾದ್ ನಿವಾಸಿಗಳು ಎನ್ನಲಾಗಿದೆ.
ಇದರ ಆಧಾರದ ಮೇಲೆ ಅಧಿಕಾರಿಗಳು ಆರೋಪಿಗಳನ್ನು ಬಂಧಿಸಿದ್ದು, 70 ಲಕ್ಷ ಮೌಲ್ಯದ ಲೆಕ್ಕಕ್ಕೆ ಸಿಗದ ನಗದು ಪತ್ತೆಯಾಗಿದೆ.
ಅಪರಾಧ ಪ್ರಕ್ರಿಯಾ ಸಂಹಿತೆಯ (CrPC) ಸೆಕ್ಷನ್ 102 ರ ಅಡಿಯಲ್ಲಿ ಇಬ್ಬರನ್ನೂ ಬಂಧಿಸಲಾಗಿದೆ. ಈ ಕುರಿತ ಹೆಚ್ಚಿನ ತನಿಖೆಗಳು ನಡೆಯುತ್ತಿವೆ ಎಂದು ಮೂಲಗಳು ವರದಿ ಮಾಡಿವೆ.