Wednesday, June 7, 2023

Latest Posts

36,000 ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿಯನ್ನು ರದ್ದುಗೊಳಿಸಿದ ಹೈಕೋರ್ಟ್

ಹೊಸ ದಿಗಂತ ಡಿಜಿಟಲ್ ಡೆಸ್ಕ್

ಅಕ್ರಮವಾಗಿ 36,000 ಪ್ರಾಥಮಿಕ ಶಾಲಾ ಶಿಕ್ಷಕರನ್ನು ನೇಮಿಸಲಾಗಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಕಲ್ಕತ್ತಾ ಹೈಕೋರ್ಟ್ ಮಹತ್ವದ ತೀರ್ಪುನ್ನು ಪ್ರಕಟಿಸಿದ್ದು, ಆ ನೇಮಕಾತಿಯನ್ನು ವಜಾಗೊಳಿಸಿದೆ.

ಈ ಪ್ರಕರಣದಲ್ಲಿ ಕಲ್ಕತ್ತಾ ಹೈಕೋರ್ಟ್ ಪ್ರಾಥಮಿಕ ಶಾಲೆಗಳಲ್ಲಿ ಶಿಕ್ಷಕರ ನೇಮಕಕ್ಕೆ ಸಂಬಂಧಿಸಿದಂತೆ ಕ್ರಮ ಆದೇಶ ಹೊರಡಿಸಿದೆ. ಕಲ್ಕತ್ತಾ ಹೈಕೋರ್ಟ್ ಸಾಕಷ್ಟು ಅನುಭವವಿಲ್ಲದವರನ್ನು ಶಿಕ್ಷಕರಾಗಿ ನೇಮಿಸಿದ್ದಾರೆ ಎಂಬ ಕಾರಣಕ್ಕಾಗಿ ವಜಾಗೊಳಿಸಿದೆ.

ಖಾಲಿ ಹುದ್ದೆಗಳನ್ನು ಹೊಸದಾಗಿ ನೇಮಕಗೊಂಡ ವ್ಯಕ್ತಿಗಳೊಂದಿಗೆ ಭರ್ತಿ ಮಾಡುವಂತೆ ಪಶ್ಚಿಮ ಬಂಗಾಳ ಪ್ರಾಥಮಿಕ ಶಿಕ್ಷಣ ಮಂಡಳಿಗೆ ನಿರ್ದೇಶನ ನೀಡಿದೆ. ಕಲ್ಕತ್ತಾ ಹೈಕೋರ್ಟ್ ನ್ಯಾಯಮೂರ್ತಿ ಅಭಿಜಿತ್ ಗಂಗೂಲಿ ಪೀಠವು ಮುಂದಿನ ಮೂರು ತಿಂಗಳಲ್ಲಿ ನೇಮಕಾತಿ ಪ್ರಕ್ರಿಯೆ ಪೂರ್ಣಗೊಳಿಸುವಂತೆ ಮಂಡಳಿಗೆ ನಿರ್ದೇಶನ ನೀಡಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!