ಹೊಸದಿಗಂತ ಡಿಜಿಟಲ್ ಡೆಸ್ಕ್:
ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ವಿರುದ್ಧ ಗಂಭೀರ ಆರೋಪ ಮಾಡಿದ ಬಳಿಕ ಇದೀಗ ತಮ್ಮ ವಿರುದ್ಧ ದಾಖಲಾಗಿರುವ ಎರಡು ಪ್ರಕರಣಗಳನ್ನು ವಜಾಗೊಳಿಸುವಂತೆ ಕೋರಿ ಚಿನ್ನ ಕಳ್ಳ ಸಾಗಣೆ ಪ್ರಕರಣದ ಆರೋಪಿ ಸ್ವಪ್ನಾ ಸುರೇಶ್ ಸಲ್ಲಿಸಿದ್ದ ಅರ್ಜಿಯನ್ನು ಕೇರಳ ಹೈಕೋರ್ಟ್ ಶುಕ್ರವಾರ ವಜಾಗೊಳಿಸಿದೆ.
ಸ್ವಪ್ನಾ ಮನವಿಯನ್ನು ವಜಗೊಳಿಸಿದ ನ್ಯಾಯಮೂರ್ತಿ ಜಿಯಾದ್ ರೆಹಮಾನ್, ಈ ಪ್ರಕರಣಗಳ ತನಿಖೆ ಆರಂಭಿಕ ಹಂತದಲ್ಲಿದೆ ಮತ್ತು ಅಂತಿಮ ವರದಿಯನ್ನು ಪ್ರಶ್ನಿಸಲು ಅರ್ಜಿದಾರರಿಗೆ ಅವಕಾಶ ಸಿಗುವಂತಾಗುತ್ತದೆ ಎಂದು ಹೇಳಿದರು. ಮುಖ್ಯಮಂತ್ರಿ ವಿಜಯನ್ ಅವರ ವಿರುದ್ಧ ಬಹಿರಂಗ ಹೇಳಿಕೆ ನೀಡಿರುವ ಸ್ವಪ್ನಾ ಅವರನ್ನು ಮನಗೊಳಿಸಲು ಮೊಕದ್ದಮೆ ಹೂಡಲಾಗಿದೆ ಮತ್ತು ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಿದ ಹೇಳಿಕೆಯನ್ನು ಹಿಂಪಡೆಯುವಂತೆ ಒತ್ತಾಯಿಸಲಾಗಿದೆ ಎಂದು ಸುರೇಶ್ ಪರ ವಕೀಲರು ವಾದಿಸಿದರು.