Sunday, December 3, 2023

Latest Posts

ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣ: ಡಿಸಿಎಂ ಡಿ.ಕೆ.ಶಿವಕುಮಾರ್‌ಗೆ ಬಿಗ್ ರಿಲೀಫ್

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣದಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ಗೆ ಹೈಕೋರ್ಟ್ ಬಿಗ್ ರಿಲೀಫ್ ನೀಡಿದ್ದು, ಮಧ್ಯಂತರ ತಡೆಯಾಜ್ಞೆಯನ್ನು ವಿಸ್ತರಣೆ ಮಾಡಿ ಆದೇಶ ಹೊರಡಿಸಿದೆ.

ಡಿಕೆ ಶಿವಕುಮಾರ್ ವಿರುದ್ಧ ಪ್ರಕರಣದ ಸಿಬಿಐ ತನಿಖೆಗೆ ಕರ್ನಾಟಕ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿತ್ತು. ಈ ತಡೆಯಾಜ್ಞೆ ತೆರವು ಮಾಡುವಂತೆ ಕೋರಿ ಸಿಬಿಐ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿತ್ತು. ಆದರೆ ಇಂದು ಹೈಕೋರ್ಟ್ ಏಕಸದಸ್ಯ ಪೀಠ ವಿಚಾರಣೆ ನಡೆಸಿ, ಸಿಬಿಐ ತನಿಖೆಗೆ ನೀಡಿದ್ದ ಮಧ್ಯಂತರ ತಡೆಯಾಜ್ಞೆ ವಿಸ್ತರಣೆ ಮಾಡಿದೆ. ಈ ಮೂಲಕ ಡಿಕೆ. ಶಿವಕುಮಾರ್ ಅವರಿಗೆ ಬಿಗ್ ರಿಲೀಫ್ ಸಿಕ್ಕಂತಾಗಿದೆ. ಕೋರ್ಟ್ ರಜಾ ದಿನಗಳ ಬಳಿಕ ಮತ್ತೆ ಅರ್ಜಿ ವಿಚಾರಣೆಯಾಗಲಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!