Saturday, April 1, 2023

Latest Posts

ಸಿಎಂ ಆದಿತ್ಯನಾಥ್ ವಿರುದ್ಧ ಪದೇ ಪದೇ ಅರ್ಜಿ ಸಲ್ಲಿಸಿದ ವ್ಯಕ್ತಿಗೆ 1 ಲಕ್ಷ ದಂಡ ವಿಧಿಸಿದ ಹೈಕೋರ್ಟ್

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

2007ರ ಗೋರಖ್‌ಪುರ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ವಿರುದ್ಧ ಪದೇ ಪದೇ ಅರ್ಜಿ ಸಲ್ಲಿಸಿದ್ದ ವ್ಯಕ್ತಿಯೊಬ್ಬನಿಗೆ ಅಲಹಾಬಾದ್ ಹೈಕೋರ್ಟ್ ಬುಧವಾರ 1 ಲಕ್ಷ ರೂಪಾಯಿ ದಂಡ ವಿಧಿಸಿದೆ.

ಸುಪ್ರೀಂ ಕೋರ್ಟ್‌ನಲ್ಲಿ ಈ ವಿಚಾರ ಇತ್ಯರ್ಥವಾಗಿದ್ದರೂ ಕೂಡ ಆದಿತ್ಯನಾಥ್ ವಿರುದ್ಧ ಪದೇ ಪದೇ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸುತ್ತಿದ್ದ, ವೃತ್ತಿಯಲ್ಲಿ ಪತ್ರಕರ್ತರಾಗಿರುವ ಪರ್ವೇಜ್‌ ಪರ್ವಾಜ್‌ ಎಂಬವವರ ಮೇಲೆ ದಂಡ ವಿಧಿಸಲಾಗಿದೆ.

2007 ಜನವರಿ 27 ರಂದು ನಡೆದ ಮೊಹರಂ ಮೆರವಣಿಗೆಯಲ್ಲಿ ಎರಡು ಪಂಗಡಗಳ ನಡುವೆ ಜಗಳ ಉಂಟಾಗಿ ಒಬ್ಬ ಹಿಂದೂ ವ್ಯಕ್ತಿಯ ಹತ್ಯೆಯಾಯಿತು.

ಈ ಘಟನೆಗೆ ಅಂದಿನ ಗೋರಖಪುರ ಸಂಸದರಾಗಿದ್ದ ಯೋಗಿ ಆದಿತ್ಯನಾಥ್‌ ಅವರು ಮಾಡಿದ ಭಾಷಣವೇ ಕಾರಣ ಮತ್ತು ಅವರ ಬಳಿ ಅದರ ವೀಡಿಯೊಗಳಿವೆ, ಹೀಗಾಗಿ ಅವರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು ಎಂದು ಪರ್ವೇಜ್‌, 2008ರ ಸೆಪ್ಟೆಂಬರ್‌ 26 ರಂದು ದೂರು ಸಲ್ಲಿಸಿದ್ದರು.

ಆದರೆ ಕಾನೂನು ಕ್ರಮ ತೆಗೆದುಕೊಳ್ಳಲು ರಾಜ್ಯ ಸರ್ಕಾರವು ನಿರಾಕರಿಸಿತ್ತು. ಸರ್ಕಾರದ ಈ ನಿರ್ಧಾರವನ್ನು ಪ್ರಶ್ನಿಸಿ ಪರ್ವೇಜ್‌ ಅಲಹಾಬಾದ್‌ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಆದರೆ ಆ ಆರ್ಜಿಯನ್ನು ಹೈಕೋರ್ಟ್‌ ವಜಾಗೊಳಿಸಿತ್ತು. ಸುಪ್ರೀಂ ಕೋರ್ಟ್‌ ಕೂಡ ಮೇಲ್ಮನವಿಯನ್ನು ತಿರಸ್ಕರಿಸಿತ್ತು.

ಅಕ್ಟೋಬರ್ 11,2022 ರಂದು ವಿಚಾರಣಾ ನ್ಯಾಯಾಲಯದ ತೀರ್ಪನ್ನು ಪ್ರಶ್ನಿಸಿದ್ದರು, ಇದರಲ್ಲಿ ನ್ಯಾಯಾಲಯವು ಗಲಭೆ ಪ್ರಕರಣದಲ್ಲಿ ಪೊಲೀಸರ ಅಂತಿಮ ವರದಿಯ ವಿರುದ್ಧದ ಪ್ರತಿಭಟನಾ ಅರ್ಜಿಯನ್ನು ತಿರಸ್ಕರಿಸಿತ್ತು.

ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್‌, ಈಗಾಗಲೇ ಸುಪ್ರೀಂ ಕೋರ್ಟ್‌ನಲ್ಲಿ ಪ್ರಕರಣ ಇತ್ಯರ್ಥವಾಗಿದೆ ಎಂದು ಹೇಳಿ ಅರ್ಜಿಯನ್ನು ತಿರಸ್ಕರಿಸಿತಲ್ಲದೆ, ಅರ್ಜಿದಾರನಿಗೆ ₹ 1 ಲಕ್ಷ ದಂಡವನ್ನೂ ವಿಧಿಸಿತು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!