Tuesday, June 28, 2022

Latest Posts

ಲಾಕ್‌ಡೌನ್ ವೇಳೆ ಸೀಜ್ ಮಾಡಿದ್ದ ವಾಹನಗಳ ರಿಲೀಸ್ ಮಾಡಲು ಹೈಕೋರ್ಟ್ ಆದೇಶ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………

ಹೊಸದಿಗಂತ ಆನ್ ಲೈನ್ ಡೆಸ್ಕ್:

ಕೊರೋನಾ ಸಂಕಷ್ಟದ ವೇಳೆ ರಾಜ್ಯ ಸರ್ಕಾರ ಜಾರಿಗೆ ತಂದಿದ್ದ ಲಾಕ್‌ಡೌನ್ ಮಾರ್ಗಸೂಚಿಯನ್ನು ಉಲ್ಲಂಘಿಸಿ ಸಂಚಾರಿಸಿದ ವಾಹನಗಳನ್ನು ಪೊಲೀಸರು ಸೀಜ್ ಮಾಡಿದ್ದು, ಇದೀಗ ವಾಹನಗಳನ್ನು ರಿಲೀಸ್ ಮಾಡುವಂತೆ ಹೈಕೋರ್ಟ್ ಸೂಚಿಸಿದೆ.
ನಿಯಮ ಉಲ್ಲಂಘಿಸಿದ ವಾಹನ ಸವಾರರಿಂದ ದಂಡ ಕಟ್ಟಿಸಿಕೊಂಡು ಬಿಡುವಂತೆ ಹೈಕೋರ್ಟ್ ಸೂಚಿಸಿದ್ದು, ವಾಹನ ಸವಾರರು ವಾಹನ ರಿಲೀಸ್‌ ಮಾಡಿಸಿಕೊಳ್ಳಲು ಕೋರ್ಟ್‌ಗೆ ಓಡಾಡುವ ಅಗತ್ಯವಿಲ್ಲ. ಪೊಲೀಸರಿಗೇ ವಾಹನ ರಿಲೀಸ್ ಮಾಡುವ ಅಧಿಕಾರವನ್ನೂ ಹೈಕೋರ್ಟ್ ನೀಡಿದೆ.
ಕೋರೋನಾ ಸೋಂಕನ್ನು ನಿಯಂತ್ರಿಸಲು ಜಾರಿಯಲ್ಲಿದ್ದ ಲಾಕ್‌ಡೌನ್ ವೇಳೆ ನಿಯಮ ಉಲ್ಲಂಘಿಸಿದವರಿಂದ ಪೊಲೀಸರು ಲಕ್ಷಾಂತರ ವಾಹನಗಳನ್ನು ಸೀಜ್ ಮಾಡಿದ್ದರು. ಇದರಿಂದ ಠಾಣೆಗಳ ಆವರಣದಲ್ಲಿ ವಾಹನ ನಿಲುಗಡೆಗೆ ಸ್ಥಳವಿಲ್ಲದೇ ಸಮಸ್ಯೆಯಾಗಿತ್ತು. ಈ ಬಗ್ಗೆ ಸೂಕ್ತ ನಿರ್ದೇಶನ ಕೋರಿ ರಾಜ್ಯ ಸರ್ಕಾರ ಕೋರ್ಟ್​ ಮೊರೆ ಹೋಗಿತ್ತು. ಸರ್ಕಾರದಿಂದ ಅರ್ಜಿ ಸಲ್ಲಿಕೆಯಾದ ಹಿನ್ನೆಲೆಯಲ್ಲಿ ಹೈಕೋರ್ಟ್‌ ಇಂದು ಈ ಆದೇಶ ನೀಡಿದೆ.
ರಾಜ್ಯದಲ್ಲಿ ವಶಪಡಿಸಿಕೊಂಡಿದ್ದ ಅಷ್ಟೂ ವಾಹನಗಳನ್ನು ರಿಲೀಸ್​ ಮಾಡುವಂತೆ ಹೈಕೋರ್ಟ್​ ಸೂಚನೆ ನೀಡಿದೆ. ವಾಹನ ಮಾಲೀಕರು ಕೋರ್ಟ್​​ಗಳತ್ತ ಬಂದು ಜನಸಂದಣಿ ಆಗುವುದು ಬೇಡ. ಜನ ಜಮಾವಣೆಯಾದರೆ ಮತ್ತೆ ಸೋಂಕು ಹಬ್ಬಲು ಸಹಕಾರಿಯಾಗುತ್ತದೆ. ಹಾಗಾಗಿ ವಾಹನಗಳ ಮಾಲೀಕರಿಂದ ದಂಡ ಕಟ್ಟಿಸಿಕೊಂಡು, ಬಾಂಡ್​ ಬರೆಯಿಸಿಕೊಂಡು ಇಡೀ ರಾಜ್ಯದಲ್ಲಿ ಆಯಾ ಪೊಲೀಸ್​ ಠಾಣೆಗಳ ವ್ಯಾಪ್ತಿಯಲ್ಲೇ ಕೇಸುಗಳನ್ನು ಇತ್ಯರ್ಥ ಪಡಿಸುವ ಅಧಿಕಾರವನ್ನು ಪೊಲೀಸರಿಗೆ ನೀಡಲಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_img
spot_img
spot_img
spot_img

Don't Miss