ಬಂಧನ, ಇಡಿ ಕಸ್ಟಡಿ ಪ್ರಶ್ನಿಸಿ ಕೇಜ್ರಿವಾಲ್ ಸಲ್ಲಿಸಿದ ತುರ್ತು ವಿಚಾರಣೆ ಅರ್ಜಿ ತಿರಸ್ಕರಿಸಿದ ಹೈಕೋಟ್೯

ಹೊಸದಿಗಂತ ಡಿಜಿಟಲ್ ಡೆಸ್ಕ್:

ತಮ್ಮ ಬಂಧನ, ಇಡಿ ಕಸ್ಟಡಿ ಪ್ರಶ್ನಿಸಿ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಸಲ್ಲಿಸಿರುವ ತುರ್ತು ವಿಚಾರಣೆ ಕೋರಿ ಅರ್ಜಿಯನ್ನು ದೆಹಲಿ ಹೈಕೋರ್ಟ್ ತಿರಸ್ಕರಿಸಿದೆ.

ಹೋಳಿ ಹಬ್ಬ ನಿಮಿತ್ತ ಎರಡು ದಿನಗಳ ಕಾಲ ಕೋರ್ಟ್ ಗೆ ರಜೆ ಇದೆ, ಬುಧವಾರ ಮತ್ತೆ ವಿಚಾರಣೆ ನಡೆಸಲಾಗುವುದು ಎಂದು ಹೈಕೋರ್ಟ್ ತಿಳಿಸಿದೆ.

ದಿಲ್ಲಿ ಮುಖ್ಯಮಂತ್ರಿ ಕೇಜ್ರಿವಾಲ್ ಅವರನ್ನು ಗುರುವಾರ ಬಂಧಿಸಲಾಗಿದೆ. ಶುಕ್ರವಾರ ರೋಸ್ ಅವೆನ್ಯೂ ನ್ಯಾಯಾಲಯ ಅವರಿಗೆ ಮಾ. 28 ರವರೆಗೆ ಇಡಿ ಕಸ್ಟಡಿಗೆ ನೀಡಿದೆ. ಇದನ್ನು ಪ್ರಶ್ನಿಸಿ ಶನಿವಾರ ಕೇಜ್ರಿವಾಲ್ ಅವರು ಅರ್ಜಿ ಸಲ್ಲಿಸಿದ್ದರಲ್ಲದೆ, ಭಾನುವಾರದೊಳಗೆ ತುರ್ತು ವಿಚಾರಣೆ ನಡೆಸುವಂತೆ ಕೋರಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!