ಗಾಂಧೀಜಿ ವಿರುದ್ಧ ಅವಹೇಳನಕಾರಿ ಪದ ಬಳಕೆ ಆರೋಪ: ಕಾಳಿ ಚರಣ್ ಜಾಮೀನು ಅರ್ಜಿಯ ತೀರ್ಪು ಕಾಯ್ದಿರಿಸಿದ ಹೈಕೋರ್ಟ್​

ಹೊಸದಿಗಂತ ಡಿಜಿಟಲ್‌ ಡೆಸ್ಕ್‌

ಮಹಾತ್ಮಾ ಗಾಂಧೀಜಿ ವಿರುದ್ಧ ಅವಹೇಳನಕಾರಿ ಪದಗಳನ್ನು ಬಳಸಿದ ಆರೋಪದ ಮೇಲೆ ಕಳೆದ ಮೂರು ತಿಂಗಳಿನಿಂದ ಜೈಲಿನಲ್ಲಿರುವ ಕಾಳಿ ಚರಣ್ ಮಹಾರಾಜ್ ಅವರ ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ಛತ್ತೀಸ್‌ಗಢ ಹೈಕೋರ್ಟ್ ತೀರ್ಪನ್ನು ಕಾಯ್ದಿರಿಸಿದೆ.
ಶುಕ್ರವಾರ ಎರಡೂ ಕಡೆಯ ವಾದ-ವಿವಾದವನ್ನು ಆಲಿಸಿದ ನ್ಯಾಯಮೂರ್ತಿ ಅರವಿಂದ್ ಸಿಂಗ್ ಚಾಂಡೇಲ್ ತೀರ್ಪು ಕಾಯ್ದಿರಿಸಿದ್ದಾರೆ.
ಕಾಳಿ ಚರಣ್ ಪರ ವಾದ ಮಂಡಿಸಿದ ಹಿರಿಯ ವಕೀಲ ಕಿಶೋರ್ ಭಾದುರಿ, ಪುಸ್ತಕಗಳಲ್ಲಿ ಬರೆದಿರುವ ಕೆಲವು ವಿಷಯಗಳನ್ನು ಕಾಳಿ ಚರಣ್ ಸಾರ್ವಜನಿಕವಾಗಿ ಹೇಳಿದ್ದಾರೆ. ಹಾಗಾಗಿ, ಇದು ಅಪರಾಧವಲ್ಲ ಎಂದು ವಾದಿಸಿದರು.
ಇದಕ್ಕೂ ಮುನ್ನ ಅವರ ಜಾಮೀನು ಅರ್ಜಿಯನ್ನು ಕೆಳ ನ್ಯಾಯಾಲಯ ತಿರಸ್ಕರಿಸಿತ್ತು. ಹೀಗಾಗಿ, ವಕೀಲ ಮೆಹುಲ್ ಜೆಥಾನಿ ಹೈಕೋರ್ಟ್‌ಗೆ ಜಾಮೀನು ಅರ್ಜಿ ಸಲ್ಲಿಸಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!