Sunday, December 10, 2023

Latest Posts

ಎಚ್​.ಡಿ ದೇವೇಗೌಡ- ಸಿಎಂ ಸಿದ್ದರಾಮಯ್ಯ ಮುಖಾಮುಖಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಮಾಜಿ ಪ್ರಧಾನಿ ಎಚ್​.ಡಿ ದೇವೇಗೌಡರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅನಿರೀಕ್ಷಿತವಾಗಿ ಭೇಟಿಯಾಗಿದ್ದಾರೆ.

ಕಾವೇರಿ ನೀರು ನಿರ್ವಹಣಾ ಮಂಡಳಿ ಸಭೆಯಲ್ಲಿ ಪಾಲ್ಗೊಳ್ಳಲು ದೆಹಲಿಗೆ ತೆರಳಲು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ , ಮಂಗಳೂರಿಗೆ ತೆರಳಲು ಆಗಮಿಸಿದ್ದ ಮಾಜಿ ಪ್ರಧಾನಿ ದೇವೇಗೌಡರು ಮತ್ತು ಇವರ ಧರ್ಮಪತ್ನಿ ಚನ್ನಮ್ಮ ಅವರು ಅನಿರೀಕ್ಷಿತವಾಗಿ ಮುಖಾಮುಖಿಯಾದರು.

ಈ ವೇಳೆ ಮುಖ್ಯಮಂತ್ರಿಗಳು ದೇವೇಗೌಡರು ಮತ್ತು ಚನ್ನಮ್ಮ ಅವರ ಆರೋಗ್ಯ ವಿಚಾರಿಸಿದರು.‌ ಬಳಿಕ ದೇವೇಗೌಡರೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆರೋಗ್ಯ ವಿಚಾರಿಸಿದರು. ಕೆಲ ಕಾಲ ಕುಶಲೋಪರಿ, ಮಾತುಕತೆ ಬಳಿಕ ಪರಸ್ಪರರು ಬೀಳ್ಕೊಟ್ಟರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!