ಬಿಜೆಪಿಯ ಅದ್ಭುತ ಪ್ರದರ್ಶನಕ್ಕೆ ಶುಭಾಶಯ ಕೋರಿದ ಹೆಚ್​ಡಿ ದೇವೇಗೌಡ

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜಸ್ಥಾನ, ಮಧ್ಯಪ್ರದೇಶ, ಛತ್ತೀಸ್​ಗಢದಲ್ಲಿ ಭರ್ಜರಿ ಗೆಲುವು ಸಾಧಿಸಿದ ಬಿಜೆಪಿಗೆ ಹಾಗೂ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರಿಗೆ ಮಾಜಿ ಪ್ರಧಾನಿ ಹೆಚ್​ಡಿ ದೇವೇಗೌಡ (HD Deve Gowda) ಅವರು ಶುಭಾಶಯ ಕೋರಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿದ ದೇವೇಗೌಡ, ಮಧ್ಯಪ್ರದೇಶ, ರಾಜಸ್ಥಾನ ಮತ್ತು ಛತ್ತೀಸ್‌ಗಢದಲ್ಲಿ ಅದ್ಭುತ ಪ್ರದರ್ಶನಕ್ಕಾಗಿ ನನ್ನ ಪಕ್ಷವು ಬಿಜೆಪಿಯ ಉನ್ನತ ನಾಯಕತ್ವವನ್ನು, ವಿಶೇಷವಾಗಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಅಭಿನಂದಿಸುತ್ತದೆ ಎಂದಿದ್ದಾರೆ.

ನರೇಂದ್ರ ಮೋದಿಯವರ ಅವರ ಅದ್ಭುತ ಪ್ರದರ್ಶನಕ್ಕೆ ಮಧ್ಯಪ್ರದೇಶ, ರಾಜಸ್ಥಾನ ಮತ್ತು ಛತ್ತೀಸ್‌ಗಢ 2023 ರ ಫಲಿತಾಂಶ ಸಾಕ್ಷಿಯಾಗಿದೆ ಎಂದರು.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!