ಸಿದ್ದರಾಮಯ್ಯರ ದುರಹಂಕಾರಕ್ಕೆ ಚುನಾವಣೆವೇ ಕೊಡುತ್ತೆ ತಕ್ಕ ಉತ್ತರ: ಎಚ್ ಡಿ ದೇವೇಗೌಡ

ಹೊಸದಿಗಂತ ವರದಿ,ಹಾಸನ:

ಜೆಡಿಎಸ್ ನಲ್ಲೆ ಬೆಳೆದು ಮತ್ತೆ ಜೆಡಿಎಸ್ ಪಕ್ಷವನ್ನು ಮುಗಿಸಬೇಕು ಎಂದು ಕರೆ ಕೊಡುವ ಸಿಎಂ ಸಿದ್ದರಾಮಯ್ಯ ಅವರ ದುರಹಂಕಾರಕ್ಕೆ ಈ ಬಾರಿಯ ಲೋಕಸಭಾ ಚುನಾವಣೆಯಲ್ಲೇ ತಕ್ಕ ಉತ್ತರ ಕೊಡಬೇಕು ಎಂದು ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಕರೆ ಕೊಟ್ಟಿದ್ದಾರೆ.

ಹಾಸನ ತಾಲೂಕಿನ ಸಾಲಗಾಮೆ ಯಲ್ಲಿ ಇಂದು ನಡೆದ ಜೆಡಿಎಸ್ ಕಾರ್ಯಕರ್ತರ ಸಭೆ ಉದ್ದೇಶಿಸಿ ಮಾತನಾಡಿದ ಅವರು, ನಮ್ಮ ಪಕ್ಕದಲ್ಲೇ ಬೆಳೆದು ಇಂದು ಅಧಿಕಾರದ ಅಹಂ ನಿಂದಾ ಬಾಯಿಗೆ ಬಂದಂತೆ ಮಾತನಾಡುವ ಜೊತೆಗೆ ಪ್ರಜ್ವಲ್ ರೇವಣ್ಣ ಅವರನ್ನು ಸೋಲಿಸಲು ಹಾಸನಕ್ಕೆ ಮೂರು ಬಾರಿ ಬಂದು ಪ್ರಜ್ವಲ್ ಸೋಲಿಸಲು ಮುಂದಾಗಿರುವ ಕಾಂಗ್ರೆಸ್ ನಾಯಕರಿಗೆ ಈ ಬಾರಿ ಮುಖಭಂಗ ಮಾಡುವ ಕೆಲಸವನ್ನು ನನ್ನ ಜಿಲ್ಲೆಯ ಜನರು ಮಾಡಬೇಕಿದೆ ಎಂದು ಕರೆ ನೀಡಿದರು.

ಕೇಂದ್ರ ಸರ್ಕಾರದ ಮೇಲೆ ಗೂಬೆ ಕೂರಿಸುವ ಸಲುವಾಗಿ ಕೇಂದ್ರ ಹಣ ನೀಡುತ್ತಿಲ್ಲ ಎಂದು ಕೋರ್ಟ್ ನಲ್ಲಿ ರಾಜ್ಯ ಸರ್ಕಾರ ಧಾವೆ ಹೂಡಿದೆ, ಪ್ರಬಲವಾದ ಪ್ರಧಾನಿ ದೇಶಕ್ಕೆ ಇರಬಾರದು ಎಂಬ ಹೇಳಿಕೆ ನೀಡಿದ್ದಾರೆ. ಪ್ರಬಲವಾದ ಪ್ರಧಾನಮಂತ್ರಿ ಇದ್ದರೆ ಇವರು ಕೇಳಿದಂತೆ ಹಣ ನೀಡುವುದಿಲ್ಲ ಎಂದು ಈ ರೀತಿ ಹೇಳಿದ್ದಾರೆ. ಈ ಬಗ್ಗೆ ಜನ ಯೋಚಿಸುವ ಅಗತ್ಯ ಇದೆ ಎಂದರು.

ದೇಶದ ಆಡಳಿತ ವ್ಯವಸ್ಥೆಯಲ್ಲಿ ಫೈನಾನ್ಸ್ ಕಮಿಷನ್ ಪ್ರತಿ ರಾಜ್ಯದ ಆರ್ಥಿಕ ಸ್ಥಿತಿ ಗತಿಗಳ ಬಗ್ಗೆ ಪ್ರತಿ ಐದು ವರ್ಷಗಳ ಬಗ್ಗೆ ಪರಿಶೀಲನೆ ನಡೆಸಿ ಆರ್ಥಿಕ ಸಮಸ್ಯೆ ಹೊಂದಿರುವ ಹಣವನ್ನು ಒದಗಿರುವ ಕೆಲಸವನ್ನು ಮಾಡುತ್ತದೆ. ಸರ್ಕಾರದ ಹಣವನ್ನು ದುರುಪಯೋಗ ಪಡಿಸಿಕೊಂಡು ತಮ್ಮ ಬಳಿ ಹಣ ಇಲ್ಲ ಎಂಬ ಕಾರಣಕ್ಕೆ ಕೇಂದ್ರ ಸರ್ಕಾರದ ವಿರುದ್ಧ ಧಾವೆ ಹೂಡುವುದು ಎಸ್ಟು ಸರಿ ಎಂದು ಪ್ರಶ್ನಿಸಿದರು.

ಜೆಡಿಎಸ್ ಎಲ್ಲಿದೆ ಎಂದು ಈ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಕೇಳಿದ್ದಾರೆ ಅವರಿಗೆ ಜೆಡಿಎಸ್ ಎಲ್ಲಿದೆ ಎಂಬುದನ್ನು ತೋರಿಸುತ್ತೇನೆ, ಈ ಭಾಗದ ಎಲ್ಲರೂ ಈ ಬಾರಿ ಜೆಡಿಎಸ್ – ಬಿಜೆಪಿ ಮೈತ್ರಿ ಅಭ್ಯರ್ಥಿಗೆ ಮತ ನೀಡುವ ಮೂಲಕ ಅಧಿಕ ಮತಗಳ ಹಂತರದಿಂದ ಗೆಲ್ಲಿಸುವ ಕೆಲಸ ಮಾಡಬೇಕು ಎಂದು ಮನವಿ ಮಾಡಿದರು..

ಎಂಪಿ ಪ್ರಜ್ವಲ್ ರೇವಣ್ಣ ಮಾತನಾಡಿ, ಈ ಹಿಂದೆ ಫಲವತ್ತಾದ ಜಮೀನಿನಲ್ಲಿ ಬೆಳೆಗಳಿಗೆ ಮಾರಕವಾದ ಬೆಳೆಯುತ್ತಿದ್ದ ಕಾಂಗ್ರೆಸ್ ಗಿಡ ಕಿತ್ತು ಹಾಕುತ್ತಿದ್ದೆವು ಅದೇ ರೀತಿ ಈ ಭಾರಿಯ ಎಂಪಿ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಕಿತ್ತು ಹಾಕುವ ಕೆಲಸ ಮಾಡಬೇಕಿದೆ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಅಭಿವೃದ್ದಿ ಮರೀಚಿಕೆಯಾಗಿದೆ ಆದುದರಿಂದ ಇಂತಹ ಸರ್ಕಾರವನ್ನು ಕಿತ್ತೊಗಿಯುವ ಕೆಲಸ ಮಾಡಬೇಕಿದೆ ಎಂದರು

ಕಷ್ಟದ ಸಂದರ್ಭದಲ್ಲಿ ಸಾಲ್ಗಾಮೆ ಹೋಬಳಿ ಹಾಗೂ ಹಾಸನ ತಾಲೂಕಿನ ಜನರು ಜೆಡಿಎಸ್ ಪಕ್ಷದ ಕೈ ಹಿಡಿದಿದ್ದಾರೆ. ಪ್ರತಿ ಚುನಾವಣೆಯಲ್ಲಿ ಹೆಚ್ಚಿನ ಶಕ್ತಿ ಕೊಟ್ಟು ಜೆಡಿಎಸ್ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸುವ ಕೆಲಸವನ್ನು ಮಾಡಿದ್ದೀರಿ ನಿಮ್ಮ ಸಹಾಯಕ್ಕೆ ನಾನು ಎಂದಿಗೂ ಚಿರಋಣಿಯಾಗಿರುತ್ತೇನೆ. ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಜೊತೆ ಜೆಡಿಎಸ್ ಮೈತ್ರಿಯಾಗಿದೆ ಆದರೆ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ಕೆಲಸ ಮಾಡಿ ಈ ಬಾರಿ ಹೇಗಪ್ಪ ಅವರ ಜೊತೆ ಕೆಲಸ ಮಾಡುವುದು ಎಂಬ ಭಾವನೆ ಕೆಲವರಲ್ಲಿ ಇದೆ ಆದರೆ ಇಂತಹ ಭಾವನೆಗಳನ್ನು ದೂರ ಮಾಡಿ ಕೇಂದ್ರದಲ್ಲಿ ನರೇಂದ್ರ ಮೋದಿ ಅವರನ್ನು ಪ್ರಧಾನಿ ಮಾಡುವ ಒಂದೇ ಉದ್ದೇಶದಿಂದ ಎಲ್ಲರೂ ಕೆಲಸ ಮಾಡುವ ಅಗತ್ಯವಿದೆ ಎಂದರು.

ಸಾಲಗಾಮೆ ಹೋಬಳಿ ವ್ಯಾಪ್ತಿಯಲ್ಲಿ ನೀರಾವರಿ ಯೋಜನೆಗೆ ಹೆಚ್ಚಿನ ಒತ್ತುಕೊಟ್ಟು ಕೆಲಸ ಮಾಡಲಿದ್ದೇನೆ ಇಲ್ಲಿಯ ಜನರ ಪ್ರಮುಖ ಕೊರತೆಯಾಗಿರುವ ಕೆರೆಗಳಿಗೆ ನೀರು ತುಂಬಿಸುವ ಕೆಲಸವನ್ನು ಮಾಡಲಿದ್ದೇನೆ. ಈಗಾಗಲೇ ಕುಮಾರಸ್ವಾಮಿ ಅವರು ಸಿಎಂ ಆಗಿದ್ದಾಗ 150 ಕೋಟಿ ವೆಚ್ಚದಲ್ಲಿ ಕೆಲಸ ಪ್ರಾರಂಭವಾಗಿದೆ ಇನ್ನು ಕೇವಲ ಒಂದುವರೆ ಕಿಲೋಮೀಟರ್ ಅಷ್ಟು ಕೆಲಸ ಬಾಕಿ ಉಳಿದಿದ್ದು ಚುನಾವಣೆ ಬಳಿಕ ಅದನ್ನು ಪೂರ್ಣಗೊಳಿಸುತ್ತೇನೆ ಎಂದು ಭರವಸೆ ನೀಡಿದರು

ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದ ವರ್ಷವೆಲ್ಲ ರಾಜ್ಯಕ್ಕೆ ಬರಗಾಲ ಬಂದಿದೆ. ಇದರಿಂದ ಬೋರ್ವೆಲ್ಗಳು ಬತ್ತಿ ಹೋಗಿ ರೈತರಿಗೆ ನೀರಿಲ್ಲದೆ ಸಂಕಷ್ಟ ಎದುರಿಸುತ್ತಿದ್ದಾರೆ ಇದಲ್ಲದೆ ಸರಿಯಾದ ವಿದ್ಯುತ್ ನೀಡದೆ ಇರುವ ಬೋರ್ವೆಲ್ ಗಳಿಂದಲೂ ನೀರನ್ನು ಪಡೆಯಲಾಗದಂತಹ ಸಂದೀಪ್ ದ ಪರಿಸ್ಥಿತಿಯಲ್ಲಿ ಹಾಸನ ಜಿಲ್ಲೆಯ ರೈತರು ಇರುವುದನ್ನು ನಾವು ಕಾಣಬಹುದು ಆದುದರಿಂದ ಮುಂದಿನ ದಿನಗಳಲ್ಲಿ ರೈತ ಪರವಾದಂತಹ ಸರ್ಕಾರವನ್ನು ಆಡಳಿತಕ್ಕೆ ತರುವ ನಿಟ್ಟಿನಲ್ಲಿ ಎಲ್ಲರೂ ಮುಂದಾಗಬೇಕೆಂದು ಕರೆ ನೀಡಿದರು

ಕಾರ್ಯಕ್ರಮದಲ್ಲಿ ಮಾಜಿ ಸಚಿವ ಎಚ್ ಡಿ ರೇವಣ್ಣ ಶಾಸಕ ಸ್ವರೂಪ್ ಪ್ರಕಾಶ್ , ಮಾಜಿ ಶಾಸಕ, ವೈ ಎಸ್ ವಿ ದತ್ತ , ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷ ಬಾಲಕೃಷ್ಣ ಮೂರ್ತಿ , ಸತ್ಯನಾರಾಯಣ. , ಸೀಗೆ ನಂಜುಂಡಪ್ಪ, ಶಿವನಂಜಪ್ಪ, ಶಿವಣ್ಣ , ಕುಮಾರ್ ಮತ್ತು ಇತರರು ಇದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!