ಹೊಸದಿಗಂತ ಡಿಜಿಟಲ್ ಡೆಸ್ಕ್:
ಆರೋಗ್ಯ ಸಮಸ್ಯೆಯಿರುವುದರಿಂದ ಜಿ20 ಶೃಂಗಸಭೆಯ ಔತಣಕೂಟಕ್ಕೆ ಹಾಜರಾಗಲು ಸಾಧ್ಯವಾಗುತ್ತಿಲ್ಲ ಎಂದು ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ ಹೇಳಿದ್ದಾರೆ.
ಈ ಕುರಿತು ಟ್ವಿಟ್ಟರ್ನಲ್ಲಿ ಟ್ವೀಟ್ ಮಾಡಿರುವ ಅವರು,ʼಅನಾರೋಗ್ಯ ಹಿನ್ನೆಲೆ ಭಾರತದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ನೇತೃತ್ವದಲ್ಲಿ ಆಯೋಜಿಸಿರುವ ಜಿ 20 ಔತಣಕೂಟದಲ್ಲಿ ನಾನು ಭಾಗವಹಿಸಲು ಸಾಧ್ಯವಾಗುತ್ತಿಲ್ಲ. ಈ ಕುರಿತು ಈಗಾಗಲೇ ಸರ್ಕಾರಕ್ಕೆ ತಿಳಿಸಿದ್ದೇನೆ. ಜಿ 20 ಶೃಂಗಸಭೆಯು ಯಶಸ್ವಿಯಾಗಲಿ ಎಂದು ನಾನು ಬಯಸುತ್ತೇನೆ’ ಎಂದು ಬರೆದು ಪ್ರಧಾನಿ ಕಚೇರಿ ಮತ್ತು ರಾಷ್ಟ್ರಪತಿ ಭವನವನ್ನು ಟ್ಯಾಗ್ ಮಾಡಿ ಪೋಸ್ಟ್ ಮಾಡಿದ್ದಾರೆ.
I will not be attending the G20 dinner organised by the Hon. President of India Draupadi Murmuji, on 09 September 2023, due to health reasons. I have already communicated this to the government. I wish the G20 summit a grand success. @PMOIndia @rashtrapatibhvn
— H D Deve Gowda (@H_D_Devegowda) September 8, 2023
ಜಿ 20 ಶೃಂಗಸಭೆಯ ಔತಣಕೂಟಕ್ಕೆ ಮಾಜಿ ಪ್ರಧಾನಿಗಳಾದ ಮನಮೋಹನ್ ಸಿಂಗ್ ಮತ್ತು ಎಚ್.ಡಿ.ದೇವೇಗೌಡ ಅವರಿಗೆ ಆಹ್ವಾನಿಸಲಾಗಿತ್ತು. ಈ ಔತಣ ಕೂಟಕ್ಕೆ ದೇಶದ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳನ್ನು ಆಹ್ವಾನಿಸಲಾಗಿದೆ.