ಮಂಡ್ಯ ಅಖಾಡದಲ್ಲಿ ಎಚ್ ಡಿ ಕುಮಾರಸ್ವಾಮಿ: ಏ.4 ರಂದು ನಾಮಪತ್ರ ಸಲ್ಲಿಕೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮಂಡ್ಯ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯಾಗಿ ಕಣಕ್ಕೆ ಇಳಿದಿರುವ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ಏಪ್ರಿಲ್ ನಾಲ್ಕರಂದು ನಾಮಪತ್ರ ಸಲ್ಲಿಸಲಿದ್ದಾರೆ.

ರಾಜ್ಯದಲ್ಲಿ ಲೋಕಸಭೆ ಚುನಾವಣೆಗೆ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ಮಾಡಿಕೊಂಡಿರುವ ಹಿನ್ನೆಲೆಯಲ್ಲಿ ಮೂರು ಕ್ಷೇತ್ರಗಳಲ್ಲಿ ಜೆಡಿಎಸ್ ಸ್ಪರ್ಧಿಸಲಿದ್ದು, ಹಾಸನ ಕೋಲಾರ ಹಾಗೂ ಮಂಡ್ಯ ಕ್ಷೇತ್ರಗಳಲ್ಲಿ ಜೆಡಿಎಸ್ ಸ್ಪರ್ಧಿಸಲಿದೆ. ಇದೀಗ ಮಂಡ್ಯ ಜೆಡಿಎಸ್ ಅಭ್ಯರ್ಥಿಯಾಗಿ ಹೆಚ್ ಡಿ ಕುಮಾರಸ್ವಾಮಿ ಅವರು ಏಪ್ರಿಲ್ 4 ರಂದು ನಾಮಪತ್ರ ಸಲ್ಲಿಸಲಿದ್ದಾರೆ.

ಅದೇ ರೀತಿಯಾಗಿ ಉಳಿದ ಎರಡು ಕ್ಷೇತ್ರಗಳಾದ ಹಾಸನದಲ್ಲಿ ಮಾಜಿ ಸಚಿವ ಎಚ್ ಡಿ ರೇವಣ್ಣ ಅವರ ಪುತ್ರ ಪ್ರಜ್ವಲ್ ರೇವಣ್ಣ ಸ್ಪರ್ಧಿಸಲಿದ್ದು, ಕೋಲಾರದಲ್ಲಿ ಮಲ್ಲೇಶ್ ಬಾಬು ಸ್ಪರ್ಧಿಸಲಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!