ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸುತ್ತಿರುವ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ, ಇದೀಗ ಹೊಸ ಬಾಂಬ್ ಸಿಡಿಸಿದ್ದಾರೆ.
ಇಂದಿನ ವಿಧಾನಸಭಾ ಕಲಾಪಕ್ಕೆ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಪೆನ್ಡ್ರೈವ್ ಹಿಡಿದು ಬಂದಿದ್ದು, ಎಲ್ಲರ ಗಮನ ಸೆಳೆದಿದೆ. ನನ್ನ ಬಳಿ ಇರುವ ಪೆನ್ಡ್ರೈವ್ನಲ್ಲಿ ಸರ್ಕಾರದ ವರ್ಗಾವಣೆ ದಂಧೆಯ ಬಗ್ಗೆ ಸಾಕ್ಷಿಗಳಿವೆ ಎಂದು ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಕುಮಾರಸ್ವಾಮಿ, ವರ್ಗಾವಣೆ ದಂಧೆಯ ದಾಖಲೆ ಈ ಪೆನ್ ಡ್ರೈವ್ ನಲ್ಲಿದೆ. ಆಡಿಯೋ ದಾಖಲೆಗಳು ಇದರಲ್ಲಿವೆ. ಸಮಯ ಬಂದಾಗ ಪೆನ್ ಡ್ರೈವ್ ದಾಖಲೆ ಬಿಡುಗಡೆ ಮಾಡುತ್ತೇನೆ ಎಂದು ಹೇಳಿದರು.