ಎಚ್‌ಡಿ ಕುಮಾರಸ್ವಾಮಿಗೆ ಮೈಲ್ಡ್ ಸ್ಟ್ರೋಕ್ ಆಗಿತ್ತು: ವೈದ್ಯರ ಹೇಳಿಕೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಅವರ ಆರೋಗ್ಯದ ಬಗ್ಗೆ ಅಪೊಲೋ ಆಸ್ಪತ್ರೆಯ ವೈದ್ಯ ಡಾ. ಸತೀಶ್‌ ಚಂದ್ರ ಹೇಳಿಕೆ ನೀಡಿದ್ದಾರೆ.

ಮುಂಜಾನೆ 3.45 ವೇಳೆಗೆ ಆಸ್ಪತ್ರೆಗೆ ಬಂದಿದ್ದ ಕುಮಾರಸ್ವಾಮಿ ಅವರಿಗೆ ಸಣ್ಣ ಪ್ರಮಾಣದಲ್ಲಿ ಸ್ಟ್ರೋಕ್‌ ಆಗಿತ್ತು. ಈಗ ಅವರಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿಸಿದ್ದಾರೆ.

ಎಚ್‌ಡಿ ಕುಮಾರಸ್ವಾಮಿಯವರ ಎಡಭಾಗದಲ್ಲಿ ರಕ್ತನಾಳ ಸಮಸ್ಯೆ ಕಾಣಿಸಿಕೊಂಡಿತ್ತು. ಇದರಿಂದಾಗಿ ಎಡಭಾಗಕ್ಕೆ ಮೈಲ್ಡ್ ಸ್ಟ್ರೋಕ್ ಆಗಿತ್ತು. ಆಸ್ಪತ್ರೆಗೆ ಬರುವಾಗ ಅವರ ಮಾತುಗಳು ತೊದಲುತ್ತಿತ್ತು. ತುಂಬಾ ಸುಸ್ತಾದವರಂತೆ ಕಾಣಿಸಿದ್ದರು. ಆಡ್ಮಿಟ್ ಆದ ಒಂದು ಗಂಟೆಯಲ್ಲೇ ಅವರ ಆರೋಗ್ಯ ಸ್ಥಿರವಾಗಿತ್ತು. ಅವರಿಗೆ ಇನ್ನೂ‌ ಐಸಿಯುನಲ್ಲಿ ಚಿಕಿತ್ಸೆ ಮುಂದುವರೆದಿದೆ ಎಂದು ವೈದ್ಯರು ತಿಳಿಸಿದ್ದಾರೆ.

ನಾಳೆ ಅವರನ್ನು ಜನರಲ್‌ ವಾರ್ಡ್ ಗೆ ಶಿಫ್ಟ್ ಮಾಡಲಿದ್ದೇವೆ. ಇನ್ನೂ 2-3 ದಿನ ಆಸ್ಪತ್ರೆಯಲ್ಲಿಯೇ ಇರಬೇಕಾಗುತ್ತದೆ. ನಾಳೆ ಬೆಳಗ್ಗೆ ಮತ್ತೊಂದು ಹೆಲ್ತ್‌ ಬುಲೆಟಿನ್ ಬಿಡುಗಡೆ ಮಾಡಲಿದ್ದೇವೆ. ಆರೋಗ್ಯವಾಗಿದ್ದಾರೆ ಯಾವುದೇ ತೊಂದರೆ ಇಲ್ಲ ಎಂದು ಸತೀಶ್‌ ಚಂದ್ರ ಹೇಳಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!