ಎಚ್‌.ಡಿ ಕುಮಾರಸ್ವಾಮಿ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್‌ ಪರಿಶೀಲಿಸಿದ ಚುನಾವಣಾ ಅಧಿಕಾರಿಗಳು

ಹೊಸದಿಗಂತ ಡಿಜಿಟಲ್‌ ಡೆಸ್ಕ್ :‌

ಚುನಾವಣಾ ನೀತಿ ಸಂಹಿತೆ ಹಿನ್ನೆಲೆಯಲ್ಲಿ ಪಂಚರತ್ನ ಯಾತ್ರೆ ಸಂಬಂಧ ಕೋಲಾರ ಜಿಲ್ಲೆಯ ಮುಳಬಾಗಿಲ ತಾಲೂಕಿನ ಶಿನಗೇನಹಳ್ಳಿ ಹೆಲಿಪ್ಯಾಡ್‌ಗೆ ಆಗಮಿಸಿದ ಮಾಜಿ ಮುಖ್ಯಮಂತ್ರಿ ಎಚ್‌.ಡಿ ಕುಮಾರಸ್ವಾಮಿಯವರ ಹೆಲಿಕಾಪ್ಟರ್‌ ಅನ್ನು ಚುನಾವಣಾಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ.

ರಾಜ್ಯದಲ್ಲಿ ಮಾದರಿ ನೀತಿ ಸಂಹಿತೆ ಜಾರಿಯಲ್ಲಿದ್ದು, ಚುನಾವಣಾ ಆಯೋಗ ಸಭೆ ಸಮಾರಂಭಗಳನ್ನು ಎಚ್ಚರಿಕೆಯಿಂದ ಗಮನಿಸುತ್ತಿದೆ.

ಅಧಿಕಾರಿಗಳು ರಾಜಕೀಯ ನಾಯಕರು ಮತ್ತು ಬೆಂಬಲಿಗರ ವಾಹನಗಳ ಮೇಲೆ ನಿಗಾ ವಹಿಸಿದ್ದು, ಚುನಾವಣಾ ಅಕ್ರಮ ನಡೆಯದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!