ಹೃದಯ ಸಂಬಂಧಿ ಶಸ್ತ್ರಚಿಕಿತ್ಸೆಗಾಗಿ ಇಂದು ಚೆನ್ನೈಗೆ ತೆರಳಲಿರುವ ಎಚ್.ಡಿ.ಕುಮಾರಸ್ವಾಮಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ಅವರು ಹೃದಯ ಸಂಬಂಧಿ ಶಸ್ತ್ರ ಚಿಕಿತ್ಸೆಗೆ ಒಳಗಾಗಲಿರುವ ಹಿನ್ನೆಲೆಯಲ್ಲಿ ಇಂದು ಚೆನ್ನೈಗೆ ತೆರಳಲಿದ್ದಾರೆ. ಇದೇ ಮಾ.21ರಂದು ಶಸ್ತ್ರ ಚಿಕಿತ್ಸೆ ನಡೆಯಲಿರುವ ಕಾರಣ ಆಸ್ಪತ್ರೆಗೆ ದಾಖಲಾಗಲಿದ್ದಾರೆ. ಮಂಗಳವಾರ ವೈದ್ಯಕೀಯ ಪರೀಕ್ಷೆ ನಡೆಸಲಾಗುವುದು ನಂತರ ಕೆಲ ಪರೀಕ್ಷೆಗಳ ಬಳಿಕ ಮಾ.21ರಂದು ಆಪರೇಷನ್ ನಡೆಯಲಿದ್ದು. ಮಾ.24ರವರೆಗೆ ಆಸ್ಪತ್ರೆಯಲ್ಲಿ ವಿಶ್ರಾಂತಿ ಪಡೆಯಲಿದ್ದಾರೆ ಎನ್ನಲಾಗಿದೆ.

ಮಾ. 25ರಂದು ಬೆಂಗಳೂರಿಗೆ ವಾಪಸಾಗಲಿದ್ದು. ಬೆಂಗಳೂರು ತಲುಪಿದ ಬಳಿಕ ಕೆಲ ದಿನಗಳ ಕಾಲ ವಿಶ್ರಾಂತಿ ಪಡೆದು ಲೋಕಸಭಾ ಚುನಾವಣಾ ಪ್ರಚಾರದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂಬ ಮಾಹಿತಿ ಇದೆ. ಆರೋಗ್ಯದ ದೃಷ್ಟಿಯಿಂದ ಕುಮಾರಸ್ವಾಮಿ ಲೋಕಸಭೆ ಚುನಾವಣೆಗೆ ಸ್ಪರ್ಧಿಸುವ ಸಾಧ್ಯತೆ ತೀರಾ ಕಡಿಮೆಯಾದರೂ ಶಸ್ತ್ರಚಿಕಿತ್ಸೆಯ ನಂತರವೇ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!