ಎಚ್‌ಡಿ ಕುಮಾರಸ್ವಾಮಿಗೆ ಅನಾರೋಗ್ಯ? ನಿಖಿಲ್‌ ಈ ಬಗ್ಗೆ ಹೇಳಿದ್ದೇನು?

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಕೇಂದ್ರ ಸಚಿವ ಮತ್ತು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರ ಆರೋಗ್ಯ ಸಮಸ್ಯೆ ಕುರಿತು ವದಂತಿಗಳು ಹರಡಿದ್ದು, ಈ ಬಗ್ಗೆ ಕುಮಾರಸ್ವಾಮಿಯವರ ಪುತ್ರ ಹಾಗೂ ಜೆಡಿಎಸ್ ಯುವ ನಾಯಕ ನಿಖಿಲ್ ಕುಮಾರಸ್ವಾಮಿಯವರು ಸ್ಪಷ್ಟನೆ ನೀಡಿದ್ದಾರೆ.

ಕುಮಾರಣ್ಣ ಅರೋಗ್ಯ ಸರಿ ಇಲ್ಲ ಅಂತ ರಾಜ್ಯದಲ್ಲೆಡೆ ಚರ್ಚೆಗಳು ಶುರುವಾಗಿದೆ, ಸೋಮೇಶ್ವರ ಸ್ವಾಮಿಯ ಸನ್ನಿಧಿಯಲ್ಲಿ ನಿಂತು ಒಂದು ಮಾತನ್ನು ತಿಳಿಸುತ್ತೇನೆ. ಅವರ ತಂದೆ ತಾಯಿ ಆಶೀರ್ವಾದ, ಭಗವಂತನ ಕೃಪೆ, ಜೊತೆಯಲ್ಲಿ ನಿಮ್ಮೆಲ್ಲರ ಪ್ರೀತಿಯ ಹಾರೈಕೆಯಿಂದ ಸನ್ಮಾನ್ಯ ಕುಮಾರಣ್ಣ ಅವರು ಆರೋಗ್ಯವಾಗಿದ್ದಾರೆ. ಯಾವುದೇ ಆರೋಗ್ಯದ ಸಮಸ್ಯೆ ಇಲ್ಲ, ಯಾರು ಕೂಡ ಆತಂಕ ಪಡುವ ಅಗತ್ಯವಿಲ್ಲ ಎಂದು ಹೇಳಿದರು.

ಈ ಹಿಂದೆ ಮೂರು ಹೃದಯ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ಕುಮಾರಸ್ವಾಮಿಯವರು, ಇತ್ತೀಚೆಗಷ್ಟೇ ಆರೋಗ್ಯ ಪರೀಕ್ಷೆಗಾಗಿ ಅಪೋಲೋ ಆಸ್ಪತ್ರೆಯಲ್ಲಿ ದೀರ್ಘಾಕಾಲ ಸಮಯ ಕಳೆದಿದ್ದು, ಬಳಿಕ ಜಿಂದಾಲ್ ನೇಚರ್‌ಕ್ಯೂರ್ ಸಂಸ್ಥೆಗೂ ಭೇಟಿ ನೀಡಿದ್ದಾರೆನ್ನಲಾಗಿದ್ದು, ಈ ಬೆಳವಣಿಗೆ ಅವರ ಆರೋಗ್ಯ ಸಮಸ್ಯೆ ಕುರಿತು ಊಹಾಪೋಹಗಳಿಗೆ ಕಾರಣವಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!