ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಂಡ್ಯ ಲೋಕಸಭೆ ಕ್ಷೇತ್ರದಿಂದ ಸ್ಪರ್ಧಿಸಿ ಭರ್ಜರಿ ಗೆಲುವು ಸಾಧಿಸಿರುವ ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಎಚ್.ಡಿ.ಕುಮಾರಸ್ವಾಮಿ ಕೇಂದ್ರ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಬಿಜೆಪಿ ನೂತನ ಸಂಸದ ಡಾ. ಮಂಜುನಾಥ್ ತಿಳಿಸಿದ್ದಾರೆ.
ನವದೆಹಲಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕುಮಾರಸ್ವಾಮಿ ಅವರು ಸಚಿವರಾಗಿ ನೇಮಕಗೊಂಡಿರುವುದು ಸಂತಸ ತಂದಿದೆ. ಜೆಡಿಎಸ್ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರಲ್ಲಿ ಆತ್ಮವಿಶ್ವಾಸ ತುಂಬಿದೆ ಎಂದರು.