ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ಅವರು ಇಂದು ದೆಹಲಿಗೆ ಪ್ರಯಾಣ ಬೆಳೆಸಿದ್ದಾರೆ.
ಇದರ ಬೆನ್ನಲ್ಲೇ ಲೋಕಸಭೆಯ ಚುನಾವಣೆಯಲ್ಲಿ ಮೈತ್ರಿ ಸಂಬಂಧ ಮಾತುಕತೆ ನಡೆಸಲು ತೆರಳುತ್ತಿದ್ದಾರೆ ಎಂದು ಹೇಳಲಾಗುತ್ತಿದೆ. ಈ ಕುರಿತು ಸ್ಪಷ್ಟನೆ ನೀಡಿದ ಅವರು ದೆಹಲಿ ಬಿಜೆಪಿ ನಾಯಕರ ಭೇಟಿ ವಿಚಾರವನ್ನು ಅಲ್ಲಗಳೆದರು.
ಲೋಕಸಭಾ ಚುನಾವಣಾ ಹಿನ್ನೆಲೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಸಂಬಂಧ ಯಾವುದೇ ಸೀಟು ಹಂಚಿಕೆ ಕುರಿತು ಚರ್ಚಗೆ ಹೋಗ್ತಿಲ್ಲ. ಬದಲಾಗಿ ವೈಯಕ್ತಿಕ ಕೆಲಸದ ನಿಮಿತ್ತ ಹೋಗುತ್ತಿದ್ದೇನೆ ಎಂದು ಹೇಳಿದರು.