ಹೊಸದಿಗಂತ ಡಿಜಿಟಲ್ ಡೆಸ್ಕ್:
2028ರಲ್ಲಿ ಕರ್ನಾಟಕದಲ್ಲಿ ಹೆಚ್‌ಡಿ ಕುಮಾರಸ್ವಾಮಿ ಮುಖ್ಯಮಂತ್ರಿ ಆಗ್ತಾರೆ ಎಂದು ಶಿಡ್ಲಘಟ್ಟ ಕ್ಷೇತ್ರದ ಜೆಡಿಎಸ್ ಶಾಸಕ ಬಿಎನ್ ರವಿಕುಮಾರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ರವಿಕುಮಾರ್, ಹೆಚ್‌ಡಿ ಕುಮಾರಸ್ವಾಮಿ ಆರೋಗ್ಯ ಸುಧಾರಿಸಿಕೊಂಡಿದ್ದು, ಈಗ ಯಾವುದೇ ಗಂಭೀರ ಸಮಸ್ಯೆಯಿಲ್ಲ. “ಮಾಜಿ ಪ್ರಧಾನಿ ಮತ್ತು ಜೆಡಿಎಸ್ ಹಿರಿಯ ನಾಯಕ ಹೆಚ್‌ಡಿ ದೇವೇಗೌಡ, ಕುಮಾರಸ್ವಾಮಿ ಅವರ ಆರೋಗ್ಯದ ಬಗ್ಗೆ ಕೆಲವು ಸುದ್ದಿಗಳು ವೈರಲ್ ಆಗಿದ್ದವು. ಆದರೆ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಗುಣಮುಖರಾಗಿದ್ದಾರೆ. ಜೆಡಿಎಸ್ ಕಾರ್ಯಕರ್ತರು ಈಗ ಆತಂಕಪಡಬೇಕಾಗಿಲ್ಲ” ಎಂದು ಅವರು ತಿಳಿಸಿದ್ದಾರೆ.
2028ರಲ್ಲಿ ಕರ್ನಾಟಕದಲ್ಲಿ ಜೆಡಿಎಸ್ ನೇತೃತ್ವದ ಸರ್ಕಾರದಲ್ಲಿ ಹೆಚ್‌ಡಿ ಕುಮಾರಸ್ವಾಮಿ ರಾಜ್ಯದ ಮುಖ್ಯಮಂತ್ರಿ ಆಗುವುದರಲ್ಲಿ ನನಗೆ ಸಂಪೂರ್ಣ ವಿಶ್ವಾಸವಿದೆ ಎಂದು ಜೆಡಿಎಸ್ ಕಥೆ ಮುಗಿಯಿತು ಎನ್ನುವವರಿಗೆ ತಿರುಗೇಟು ನೀಡಿದ್ದಾರೆ.