ಎಚ್.ಡಿ.ಕುಮಾರಸ್ವಾಮಿ ಮೂರು ಲಕ್ಷ ಮತಗಳ ಅಂತರದಿಂದ ಗೆಲ್ಲಲಿದ್ದಾರೆ: ಬಿ.ವೈ.ವಿಜಯೇಂದ್ರ ಭವಿಷ್ಯ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷ ಹಣ ಬಲವುಳ್ಳ ಗುತ್ತಿಗೆದಾರನನ್ನು ಚುನಾವಣೆಗೆ ನಿಲ್ಲಿಸಿದೆ. ಮೈತ್ರಿಕೂಟ ಜನ ನಾಯಕ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಮೂರು ಲಕ್ಷ ಮತಗಳ ಅಂತರದಿಂದ ಗೆಲ್ಲಲಿದ್ದಾರೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು.

ಜೆಡಿಎಸ್-ಬಿಜೆಪಿ ಮೈತ್ರಿಕೂಟದ ಪಕ್ಷಗಳು ಆಯೋಜಿಸಿರುವ ಪ್ರಮುಖ ಸಾರ್ವಜನಿಕ ಸಭೆಯು ಹಣದ ಬಲ ಮತ್ತು ಜನಬಲದ ನಡುವಿನ ಆಯ್ಕೆಯನ್ನು ಪ್ರಶ್ನಿಸುತ್ತದೆ. ಜನ ಬಲ ಕುಮಾರಸ್ವಾಮಿ ನಾಯಕರನ್ನು ಗರಿಷ್ಠ ಬಹುಮತದಿಂದ ಆಯ್ಕೆ ಮಾಡಿ ಲೋಕಸಭೆಗೆ ಕಳುಹಿಸಬೇಕು ಎಂದರು.

ಮಂಡ್ಯ ಜಿಲ್ಲೆಯಲ್ಲಿ ಸ್ಪರ್ಧಿಸಲು ಎಚ್.ಡಿ.ಕುಮಾರಸ್ವಾಮಿ ಅವರನ್ನು ಕರೆತಂದವರು ನಾವು. ಮಂಡ್ಯ ಜಿಲ್ಲಾ ಸ್ಪರ್ಧೆಗೆ . ಕ್ಷೇತ್ರದ ಪ್ರಜ್ಞಾವಂತ ಮತದಾರರು ಹಾಗೂ ತಾಯಂದಿರು ತಮ್ಮ ಮತವನ್ನು ದುರಾಸೆಗೆ ಮಾರಿಕೊಳ್ಳುವುದಕ್ಕಿಂತ ಕುಮಾರಸ್ವಾಮಿ ಅವರನ್ನು ಬೆಂಬಲಿಸಿ ಎಂದು ಹುರಿದುಂಬಿಸಿದ್ದಾರೆ.

ಕಳೆದ ಉಪ ಚುನಾವಣೆಯಲ್ಲಿ ಕೆ.ಆರ್.ಪೇಟೆ ಉಸ್ತುವಾರಿ ತೆಗೆದುಕೊಂಡು ನಮ್ಮ ಅಭ್ಯರ್ಥಿ ಕೆ.ಸಿ.ನಾರಾಯಣಗೌಡರನ್ನು ಗೆಲ್ಲಿಸಿಕೊಟ್ಟರೆ, ಕ್ಷೇತ್ರದ ಅಭಿವೃದ್ಧಿ ಮಾಡುವುದಾಗಿ ಮಾತು ಕೊಟ್ಟಿದ್ದೆ. ಅದರಂತೆ ಬಿಜೆಪಿ ಸರ್ಕಾರ ಕೆ.ಸಿ. ನಾರಾಯಣಗೌಡರನ್ನು ಸಚಿವರನ್ನಾಗಿ ಮಾಡಿ 1800 ಕೋಟಿಗೂ ಅಧಿಕ ಅನುದಾನ ನೀಡಿ ಕ್ಷೇತ್ರದ ಅಭಿವೃದ್ಧಿ ಮಾಡಿದೆ ಎಂದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!