ಹೊಸದಿಗಂತ ಡಿಜಿಟಲ್ ಡೆಸ್ಕ್:
ಹೆಚ್.ಡಿ ಕುಮಾರಸ್ವಾಮಿ ಆರೋಗ್ಯವಾಗಿದ್ದಾರೆ. ಯಾರೂ ಆತಂಕ ಪಡುವ ಅಗತ್ಯವಿಲ್ಲ. ಅವರಿಗೆ ವೈದ್ಯರು ಚಿಕಿತ್ಸೆ ನೀಡುತ್ತಿದ್ದು, ಶೀಘ್ರವೇ ಗುಣಮುಖರಾಗಿ ಮನೆಗೆ ಮರಳಲಿದ್ದಾರೆ ಅಂತ ಪುತ್ರ ನಿಖಿಲ್ ಕುಮಾರಸ್ವಾಮಿ ತಿಳಿಸಿದ್ದಾರೆ.
ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಅವರಿಗೆ ಸುದ್ದಿಗೋಷ್ಠಿಯ ಸಂದರ್ಭ ಮೂಗಿನಲ್ಲಿ ರಕ್ತಸ್ರಾವ ಆಗಿತ್ತು.ಕೂಡಲೇ ಅವರನ್ನು ಜಯನಗರದ ಅಪೊಲೋ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ.
ಈ ಬಗ್ಗೆ ಆಸ್ಪತ್ರೆಯ ಬಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಪುತ್ರ ನಿಖಿಲ್ ಕುಮಾರಸ್ವಾಮಿ , ಕೆಲಸದ ಒತ್ತಡದಿಂದ ವಿಶ್ರಾಂತಿ ಇಲ್ಲದೇ ಹೀಗೆ ಆಗಿದೆ. ವಿಶ್ರಾಂತಿ ಪಡೆದುಕೊಳ್ಳದ ಕಾರಣ, ರಕ್ತಸ್ರಾವ ಆಗಿರುವುದಾಗಿ ವೈದ್ಯರು ಮಾಹಿತಿ ನೀಡಿದ್ದಾರೆ ಎಂದರು.
ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಅವರಿಗೆ ಆತಂಕ ಪಡುವಂತ ಏನು ಆಗಿಲ್ಲ. ಅವರು ಆರೋಗ್ಯವಾಗಿದ್ದಾರೆ. ಕುಮಾರಣ್ಣನ ಮೇಲೆ ತಂದೆ ತಾಯಿ ಆಶೀರ್ವಾದ, ಈ ನಾಡಿನ ಜನತೆಯ ಆಶೀರ್ವಾದವಿದೆ. ಏನೂ ಆಗಿಲ್ಲ. ಆರೋಗ್ಯವಾಗಿದ್ದಾರೆ. ಹೆಚ್.ಡಿ ಕುಮಾರಸ್ವಾಮಿ ಆರೋಗ್ಯದ ಬಗ್ಗೆ ಆಂತಕ ಪಡುವ ಅಗತ್ಯವಿಲ್ಲ ಅಂತ ಸ್ಪಷ್ಟ ಪಡಿಸಿದರು.