ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಉತ್ತರ ಕನ್ನಡ ಜಿಲ್ಲೆಯ ಶಿರೂರಿನ ಗುಡ್ಡ ಕುಸಿತ ಪ್ರದೇಶಕ್ಕೆ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿಯವರು ಭೇಟಿ ನೀಡಿದ್ದು, ಈ ವೇಳೆ ಮಾಧ್ಯಮದವರಿಗೆ ಕುಮಾರಸ್ವಾಮಿ ಭೇಟಿ ನೀಡಿದನ್ನು ಸುದ್ದಿಯಾಗದಂತೆ ಮಾಧ್ಯಮಕ್ಕೆ ತಡೆ ವಿಧಿಸಲಾಗಿದೆ. ಮಾಧ್ಯಮಗಳಿಗೆ ಜಿಲ್ಲಾಡಳಿತ ಬ್ಯಾರಿಕೇಡ್ ಹಾಕಿ ತಡೆ ಹಿಡಿದಿದೆ.
ಹೆಚ್‌ಡಿಕೆ ಭೇಟಿ ಸುದ್ದಿ ಮಾಡದಂತೆ ತಡೆಯಲು ಯತ್ನಿಸಲಾಗಿದೆ. ರಾಜ್ಯ ಸರ್ಕಾರದಿಂದ ರಕ್ಷಣಾ ಕಾರ್ಯದಲ್ಲೂ ರಾಜಕಾರಣ ಮಾಡಲಾಗುತ್ತಿದೆ. ನಿನ್ನೆವರೆಗೂ ಅವಕಾಶ ನೀಡಿದ್ದ ಜಿಲ್ಲಾಡಳಿತ, ಹೆಚ್‌ಡಿಕೆ ಭೇಟಿ ಹಿನ್ನೆಲೆ ಇಂದು ಏಕಾಏಕಿ ತಡೆ ನೀಡಿದೆ.
ಸಿಎಂ ಸಿದ್ದರಾಮಯ್ಯ ಅವರ ಈ ನಡೆಯ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.
ಈ ವಿಚಾರವಾಗಿ ಎಕ್ಸ್‌ನಲ್ಲಿ ಜೆಡಿಎಸ್ ಅಭಿಪ್ರಾಯ ಹಂಚಿಕೊಂಡಿದ್ದು, ಸಿದ್ದರಾಮಯ್ಯನ ಕೀಳುಮಟ್ಟದ ರಾಜಕೀಯ..! ಕುಮಾರಸ್ವಾಮಿ ಭೇಟಿ ಸುದ್ದಿಯಾಗದಂತೆ ತಡೆಕೈ ಸರ್ಕಾರದ ಸಂವಿಧಾನ ವಿರೋಧಿ ನಡೆ! ಶಿರೂರಿನ ಗುಡ್ಡ ಕುಸಿತ ಪ್ರದೇಶಕ್ಕೆ ಕೇಂದ್ರ ಸಚಿವರಾದ ಹೆಚ್.ಡಿ ಕುಮಾರಸ್ವಾಮಿಯವರು ಭೇಟಿ ನೀಡುವುದು ಸುದ್ದಿಯಾಗದಂತೆ ತಡೆಯಲು ಯತ್ನಿಸಿರುವುದು ಸಿದ್ದರಾಮಯ್ಯ ಅವರ ಅಂಜು ಬುರುಕುತನ ತೋರಿಸುತ್ತದೆ.
ರಕ್ಷಣಾ ಕಾರ್ಯಾಚರಣೆ ಸ್ಥಳದಿಂದ ೫ ಕಿ.ಮೀ ದೂರದಲ್ಲೇ ಬ್ಯಾರಿಕೇಡ್ ಹಾಕಿ ಮಾಧ್ಯಮಗಳ ಪ್ರವೇಶಕ್ಕೆ ನಿರ್ಬಂಧ ವಿಧಿಸಿದ್ದಾರೆ. ಮಾಧ್ಯಮಗಳ ಸ್ವತಂತ್ರ್ಯ ಹತ್ತಿಕ್ಕುವ ನಿಮ್ಮ ಈ ನಡೆ ಸಂವಿಧಾನ ವಿರೋಧಿ ಅಲ್ಲವೇ ಮುಖ್ಯಮಂತ್ರಿಗಳೇ.?ದುರಂತ ನಡೆದು ಇಷ್ಟು ದಿನಗಳಾದರೂ ಶಿರೂರಿಗೆ ನೀವಾಗಲಿ, ನಿಮ್ಮ ಸರ್ಕಾರದ ಯಾವುದೇ ಸಚಿವರಾಗಲಿ, ಸ್ಥಳಕ್ಕೆ ಭೇಟಿ ನೀಡಿಲ್ಲ. ಸಂತ್ರಸ್ಥರ ಸಂಕಷ್ಟ ಆಲಿಸಿಲ್ಲ. ಆದರೆ ಮಾನ್ಯ ಕುಮಾರಸ್ವಾಮಿ ಅವರು ಶಿರೂರು ಗ್ರಾಮಕ್ಕೆ ಭೇಟಿ ನೀಡುವ ವೇಳೆಯೂ ನಿಮ್ಮ ಸರ್ಕಾರದ ಈ ಸೇಡಿನ ರಾಜಕೀಯ ಥರವೇ? ಅದೇನೇ ಇರಲಿ, ಕುಮಾರಸ್ವಾಮಿ ಅವರಂತೂ ಪ್ರಚಾರಕ್ಕೆನೂ ಶಿರೂರಿಗೆ ಭೇಟಿ ನೀಡುತ್ತಿಲ್ಲ, ಜಿಲ್ಲಾಡಳಿತವನ್ನು ಬಳಸಿ ಮಾಧ್ಯಮದವರನ್ನು ತಡೆದ ಮಾತ್ರಕ್ಕೆ, ಕುಮಾರಸ್ವಾಮಿ ಅವರ ಭೇಟಿ ನಿಲ್ಲಿಸಲು ಸಾಧ್ಯವೇ? ಸಂತ್ರಸ್ಥರ ಕಷ್ಟ ಆಲಿಸುವುದನ್ನು ತಡೆಯಲು ಸಾಧ್ಯವೇ?ರಕ್ಷಣಾ ಕಾರ್ಯಾಚರಣೆ ಸ್ಥಳದಿಂದ 5 ಕಿ.ಮೀ ದೂರದಲ್ಲೇ ಬ್ಯಾರಿಕೇಡ್ ಹಾಕಿ ಮಾಧ್ಯಮಗಳ ಪ್ರವೇಶಕ್ಕೆ ನಿರ್ಬಂಧ ವಿಧಿಸಿದ್ದಾರೆ. ಇದು ಕೈ ಸರ್ಕಾರದ ಸಂವಿಧಾನ ವಿರೋಧಿ ನಡೆ. ಮಾಧ್ಯಮಗಳ ಸ್ವಾತಂತ್ರ್ಯ ಹತ್ತಿಕ್ಕುವ ನಿಮ್ಮ ಈ ನಡೆ ಸಂವಿಧಾನ ವಿರೋಧಿ ಅಲ್ಲವೇ ಎಂದು ಸಿಎಂಗೆ ಜೆಡಿಎಸ್ ಪ್ರಶ್ನಿಸಿದೆ.