ಮತ್ತೆ ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ ಹೆಚ್‌ಡಿ ರೇವಣ್ಣ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌

ಹೊಳೆನರಸೀಪುರ ಶಾಸಕ ಹೆಚ್‌ಡಿ ರೇವಣ್ಣ ಅವರು ಮತ್ತೆ ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ್ದಾರೆ. ಮೈಸೂರಿನ ಕೆ.ಆರ್.ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ಸಂಬಂಧ ಈ ಅರ್ಜಿ ಸಲ್ಲಿಸಿದ್ದಾರೆ.

ಕೆ.ಆರ್.ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ಹಿನ್ನೆಲೆ ಇಂದು ವಿಚಾರಣೆಗೆ ಹಾಜರಾಗಬೇಕಿದ್ದ ರೇವಣ್ಣ ಎಸ್ಐಟಿ ಮುಂದೆ ಹಾಜರಾಗಿಲ್ಲ. ಬೆಂಗಳೂರಿನ ಸೆಷನ್ಸ್ ಕೋರ್ಟ್ ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಕೆ ಮಾಡಲಾಗಿದ್ದು, ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಮುಂದೆ ವಿಚಾರಣೆ ನಡೆಸಲಾಗಿದೆ.

ರೇವಣ್ಣ ಪರ ವಕೀಲ ಮೂರ್ತಿ ಡಿ.ನಾಯ್ಕ್ ನ್ಯಾಯಲಯಕ್ಕೆ ಹಾಜರಾಗಿ ನಿರೀಕ್ಷಣಾ ಜಾಮೀನಿಗೆ ವಾದ ಮಂಡನೆ ಮಾಡಿದರು. ಈ ವೇಳೆ ನ್ಯಾಯ ಮೂರ್ತಿಗಳು ಜಾಮೀನು ಸಹಿತ ಸೆಕ್ಷನ್‌? ಅಥವಾ ಜಾಮೀನು ರಹಿತ ಸೆಕ್ಷನ್ ಎಂದು ಕೇಳಿದರು. ಇದಕ್ಕೆ ಪ್ರತಿಕ್ರಿಯಿಸಿದ ವಕೀಲರು ನಾನ್ ಬೇಲೆಬಲ್ ಸೆಕ್ಷನ್ ಹಾಕಲಾಗಿದೆ ಎಂದು ಕೋರ್ಟ್ ಗೆ ಮಾಹಿತಿ ನೀಡಿದರು.

ಬೇರೆ ಕೇಸಲ್ಲಿ 41a ಅಡಿ ನೋಟಿಸ್ ನೀಡಲಾಗಿದೆ. ನಿನ್ನೆ ರಾತ್ರಿ ಮತ್ತೆ ಎಫ್ಐಆರ್ ದಾಖಲಿಸಲಾಗಿದೆ. ಕಿಡ್ನಾಪ್ ಆದ ಮಹಿಳೆಯ ಹೆಸರು ಎಫ್ಐಆರ್ ನಲ್ಲಿ ಉಲ್ಲೇಖಿಸಿಲ್ಲ ಎಂದು ರೇವಣ್ಣ ಪರ ವಕೀಲ ಮೂರ್ತಿ ಡಿ ನಾಯ್ಕ್ ವಾದ ಮಂಡಿಸಿದರು. ನಾಳೆ ಎಸ್ಐಟಿ ವಿಚಾರಣೆಗೆ ಹಾಜರಾಗುತ್ತೇವೆ. ಹೀಗಾಗಿ ಮಧ್ಯಂತರ ನಿರೀಕ್ಷಣಾ ಜಾಮೀನು ನೀಡುವಂತೆ ಮನವಿ ಮಾಡಿಕೊಂಡರು.
ಮಧ್ಯಂತರ ನಿರೀಕ್ಷಣಾ ಜಾಮೀನು ಮನವಿಗೆ ಯಾವುದೇ ಪ್ರತಿಕ್ರಿಯೆ ನೀಡದ ನ್ಯಾಯಾಧೀಶರು ಮುಂದಿನ ವಿಚಾರಣೆಯನ್ನು ನಾಳೆ ಬೆಳಗ್ಗೆ 11ಗಂಟೆಗೆ ವಿಚಾರಣೆಯನ್ನು ಮುಂದೂಡಿದರು.

ಮೈಸೂರಿನ ಕೆಆರ್‌ ನಗರದಲ್ಲಿ ಸಂತ್ರಸ್ಥೆಯೊಬ್ಬರನ್ನು ಕಿಡ್ನಾಪ್‌ ಮಾಡಿ ಅಡಗಿಸಿಟ್ಟಿರುವ ಪ್ರಕರಣ ಇದಾಗಿದ್ದು, ಸಂತ್ರಸ್ಥೆ ಮಗ ಈ ಸಂಬಂಧ ದೂರು ನೀಡಿದ್ದಾನೆ. ಪ್ರಕರಣ ಸಂಬಂಧ ಈಗಾಗಲೇ ಕಾಣೆಯಾಗಿರುವ ಮಹಿಳೆಗೆ ತೀವ್ರ ಹುಡುಕಾಟ ನಡೆಯುತ್ತಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!