ಎಚ್‌.ಡಿ. ರೇವಣ್ಣಗೆ ಎದೆ ಉರಿ, ಹೊಟ್ಟೆನೋವು: ಆಸ್ಪತ್ರೆಗೆ ದಾಖಲು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಪೆನ್‌ಡ್ರೈವ್‌ ಪ್ರಕರಣಕ್ಕೆ (Hassan Pen Drive Case) ಹಾಗೂ ಸಂತ್ರಸ್ತ ಮಹಿಳೆಯನ್ನು ಅಪಹರಣ ಮಾಡಿದ ಕೇಸ್‌ ಅಡಿ ಎಸ್‌ಐಟಿ ವಶದಲ್ಲಿರುವ ಮಾಜಿ ಸಚಿವ ಎಚ್‌.ಡಿ. ರೇವಣ್ಣ ಅವರಿಗೆ ಹೊಟ್ಟೆನೋವು ಕಾಣಿಸಿಕೊಂಡಿದ್ದು,. ಈ ಹಿನ್ನೆಲೆಯಲ್ಲಿ ಬೌರಿಂಗ್‌ ಆಸ್ಪತ್ರೆಯಿಂದ ವಿಕ್ಟೋರಿಯಾ ಆಸ್ಪತ್ರೆಗೆ ಅವರನ್ನು ಎಸ್‌ಐಟಿ ಅಧಿಕಾರಿಗಳು ಕರೆದುಕೊಂಡು ಹೋಗಿದ್ದಾರೆ.

ಕಳೆದ ನಾಲ್ಕು ದಿನಗಳಿಂದ ಎಸ್‌ಐಟಿ ವಶದಲ್ಲಿರುವ ಎಚ್.ಡಿ. ರೇವಣ್ಣ ಅವರು ತಮಗೆ ಅತೀವ ಹೊಟ್ಟೆ ನೋವಿದೆ ಎಂದು ಹೇಳಿಕೊಂಡಿದ್ದು,ಅಲ್ಲದೆ, ಎದೆ ಉರಿ ಸಹ ಇದೆ ಎಂದು ಹೇಳಿದ್ದಾರೆ. ಈ ಹಿನ್ನೆಲೆಯಲ್ಲಿ ಕೂಡಲೇ ಅವರನ್ನು ಬೌರಿಂಗ್‌ ಆಸ್ಪತ್ರೆಗೆ ಚಿಕಿತ್ಸೆಗಾಗಿ ಕರೆತರಲಾಗಿದೆ. ಅಲ್ಲಿ ಮೊದಲು ಬಿಪಿ, ಶುಗರ್ ಹಾಗೂ ಇಸಿಜಿ ತಪಾಸಣೆಯನ್ನು ನಡೆಸಲಾಗಿದೆ. ಇವು ನಾರ್ಮಲ್‌ ಇದ್ದ ಕಾರಣದಿಂದ ಅಲ್ಲಿಂದ ಹೆಚ್ಚಿನ ತಪಾಸಣೆಗಾಗಿ ವಿಕ್ಟೋರಿಯಾ ಆಸ್ಪತ್ರೆಗೆ ಕರೆತರಲಾಗಿದೆ.

ಗ್ಯಾಸ್ಟ್ರಿಕ್‌ ಹಿನ್ನೆಲೆ‌ಯಲ್ಲಿ ಹೊಟ್ಟೆ ನೋವು ಬಂದಿರಬಹುದು ಎಂದು ವೈದ್ಯರು ಅಂದಾಜಿಸಿದ್ದಾರೆ. ಈ ಸಂಬಂಧ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಗ್ಯಾಸ್ಟ್ರೋಎಂಟರಾಲಜಿಸ್ಟ್ ಅವರ ಬಳಿ ತಪಾಸಣೆಗೊಳಪಡಿಸಲಾಗುತ್ತದೆ. ಹೀಗಾಗಿ ರೇವಣ್ಣ ಅವರಿಗೆ ತಪಾಸಣೆ ಮಾಡಿ, ಅಡ್ಮಿಟ್ ಮಾಡುವ ಅವಶ್ಯಕತೆ ಇದೆ ಎಂದು ವೈದ್ಯರು ಸೂಚಿಸಿದರೆ ಆ ಬಗ್ಗೆ ಎಸ್‌ಐಟಿ ಅಧಿಕಾರಿಗಳು ನಿರ್ಧಾರವನ್ನು ತೆಗೆದುಕೊಳ್ಳಲಿದ್ದಾರೆ ಎನ್ನಲಾಗಿದೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!