ಎಸ್‌ಐಟಿ ವಶಕ್ಕೆ ಎಚ್‌.ಡಿ.ರೇವಣ್ಣ: ಮಹತ್ವದ ಸಭೆ ನಡೆಸಿದ ಎಚ್‌.ಡಿ.ಕುಮಾರಸ್ವಾಮಿ

ಹೊಸದಿಗಂತ ಡಿಜಿಟಲ್ ಡೆಸ್ಕ್:
 
ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆಯನ್ನು ಅಪಹರಿಸಿದ ಪ್ರಕರಣದಲ್ಲಿ ಎಚ್‌.ಡಿ.ರೇವಣ್ಣ ಅವರನ್ನು ಎಸ್‌ಐಟಿ ಅಧಿಕಾರಿಗಳು (SIT Officials) ವಶಪಡಿಸಿಕೊಂಡಿದ್ದು, ಇದರ ಬೆನ್ನಲ್ಲೇ ಮಾಜಿ ಸಿಎಂ, ಜೆಡಿಎಸ್‌ ನಾಯಕ ಎಚ್‌.ಡಿ.ಕುಮಾರಸ್ವಾಮಿ ಅವರು ಜಿ.ಟಿ.ದೇವೇಗೌಡ ಸೇರಿ ಹಲವರೊಂದಿಗೆ ಮಹತ್ವದ ಸಭೆ ನಡೆಸಿದ್ದಾರೆ.

ಲೈಂಗಿಕ ದೌರ್ಜನ್ಯ ಪ್ರಕರಣವು ಜೆಡಿಎಸ್‌ಗೆ ಮುಜುಗರ ತಂದಿದ್ದು, ಮೈತ್ರಿ ಪಕ್ಷವಾದ ಬಿಜೆಪಿಯೂ ಪ್ರಕರಣದಿಂದ ದಿನೇದಿನೆ ಅಂತರ ಕಾಪಾಡಿಕೊಳ್ಳುತ್ತಿದೆ. ಹಾಗಾಗಿ, ಎಚ್‌.ಡಿ.ರೇವಣ್ಣ ಅವರನ್ನೂ ಪಕ್ಷದಿಂದ ಅಮಾನತುಗೊಳಿಸಲು ಕುಮಾರಸ್ವಾಮಿ ಚಿಂತನೆ ನಡೆಸಿದ್ದಾರೆ ಎಂದು ಹೇಳಲಾಗುತ್ತಿದೆ. ಹಾಗೊಂದು ವೇಳೆ ಅಮಾನತುಗೊಳಿಸಿದರೆ ತಂದೆ-ಮಗ ಇಬ್ಬರೂ ಅಮಾನತಾದಂತಾಗುತ್ತದೆ.

ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆಯನ್ನು ಅಪಹರಣ ಮಾಡಿದ ಕೇಸ್‌ನಲ್ಲಿ ಮೊದಲ ಆರೋಪಿಯಾಗಿರುವ ರೇವಣ್ಣ ಅವರನ್ನು ಎಸ್‌ಐಟಿ ಅಧಿಕಾರಿಗಳು ಸಿಐಡಿ ಕಚೇರಿಗೆ ಕರೆದುಕೊಂಡು ಹೋಗಿದ್ದಾರೆ. ಅಲ್ಲಿ, ರೇವಣ್ಣ ಅವರನ್ನು ವಶಪಡಿಸಿಕೊಂಡಿರುವ ಕುರಿತು ಪ್ರಕ್ರಿಯೆ ಮುಗಿಸುವ ಅವರು ವೈದ್ಯಕೀಯ ಪರೀಕ್ಷೆಗಾಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಲಿದ್ದಾರೆ. ಆದಾಗ್ಯೂ, ಬಂಧಿಸಿದ 24 ಗಂಟೆಯೊಳಗೆ ನ್ಯಾಯಾಲಯಕ್ಕೆ ಹಾಜರುಪಡಿಸಬೇಕಾದ ಕಾರಣ ಎಸ್‌ಐಟಿ ಅಧಿಕಾರಿಗಳು ವೈದ್ಯಕೀಯ ಪರೀಕ್ಷೆ ಬಳಿಕ ವಿಚಾರಣೆ ನಡೆಸಲಿದ್ದಾರೆ. ಇಲ್ಲವೇ, ನ್ಯಾಯಾಲಯಕ್ಕೆ ಹಾಜರುಪಡಿಸಲಿದ್ದಾರೆ ಎಂದು ತಿಳಿದುಬಂದಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!