ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಾಜಿ ಸಚಿವ ಎಚ್.ಡಿ.ರೇವಣ್ಣ ದೇವಸ್ಥಾನದಲ್ಲಿ ಕಾಲು ಜಾರಿ ಬಿದ್ದು ಪಕ್ಕೆಲುಬಿಗೆ ಪೆಟ್ಟಾಗಿದ್ದು, ಚಿಕಿತ್ಸೆಗಾಗಿ ಹೊಳೆನರಸೀಪುರದ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ.
ಏಕಾದಶಿ ಪ್ರಯುಕ್ತ ಉಪವಾಸವಿದ್ದ ಎಚ್.ಡಿ.ರೇವಣ್ಣ, ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಹರದನಹಳ್ಳಿ ದೇವೇಶ್ವರ ದೇವಾಲಯಕ್ಕೆ ತೆರಳಿದ್ದರು. ಪೂಜೆ ಸಲ್ಲಿಸಿ ಬರುವ ವೇಳೆ ಕಾಲು ಜಾರಿ ಬಿದ್ದಿದ್ದಾರೆ.
ಈ ವೇಳೆ ಕಾಲು ಜಾರಿ ಬಿದ್ದಿದ್ದರಿಂದ ಪಕ್ಕೆಲುಬು ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಹೊಳೆನರಸೀಪುರದ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ.
ಉಪವಾಸ ಹಾಗೂ ತೀವ್ರ ಪಕ್ಕೆಲುಬು ನೋವಿನ ಕಾರಣ ಸುಸ್ತಾಗಿರುವ ಎಚ್.ಡಿ.ರೇವಣ್ಣ ಅವರಿಗೆ ಹೊಳೆನರಸೀಪುರದ ತಾಲೂಕು ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.