ಹೊಳೆನರಸಿಪುರ ಜೆಡಿಎಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಹೆಚ್​ಡಿ ರೇವಣ್ಣ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

ಚುನಾವಣೆಗೆ ಕೆಲವೇ ದಿನಗಳು ಬಾಕಿಯಿದ್ದು, ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ ಭರಾಟೆ ಜೋರಾಗಿದೆ. ಜೆಡಿಎಸ್‌ ಅಭ್ಯರ್ಥಿ ಹೆಚ್‌ಡಿ ರೇವಣ್ಣ ಇಂದು ನಾಮಪತ್ರ ಸಲ್ಲಿಸಿದರು.

ಹೊಳೆನರಸೀಪುರ ಕ್ಷೇತ್ರದ ಅಭ್ಯರ್ಥಿಯಾಗಿ ಮಾಜಿ ಸಚಿವ ಹೆಚ್​.ಡಿ ರೇವಣ್ಣ ಸಹಾಯಕ ಚುನಾವಣಾಧಿಕಾರಿ ನಯೀಮ್​ ಅವರಿಗೆ ನಾಮಪತ್ರ ಸಲ್ಲಿಸಿದ್ದಾರೆ. ನಾಮಪತ್ರ ಸಲ್ಲಿಕೆಗೂ ಮುನ್ನ ರೇವಣ್ಣ ಕುಟುಂಬ ಸಮೇತರಾಗಿ ವಿವಿಧ ದೇವಾಲಯಗಳಿಗೆ ಭೇಟಿ ನೀಡಿ ವಿಶೇಷ ಪೂಜೆ ಮಾಡಿಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!