ಎಸ್‌ಐಟಿ ವಶಕ್ಕೆ ಹೆಚ್‌.ಡಿ ರೇವಣ್ಣ: ಸಿಎಂ ಸಿದ್ದರಾಮಯ್ಯ ರಿಯಾಕ್ಷನ್ ಏನು?

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮಾಜಿ ಸಚಿವ ಹೆಚ್‌.ಡಿ ರೇವಣ್ಣ ಪ್ರಕರಣದಲ್ಲಿ ನಾವು ಮಧ್ಯಪ್ರವೇಶ ಮಾಡಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಈ ಸಂಬಂಧ ನಾನು ಪೊಲೀಸರ ಜೊತೆ ಮಾತನಾಡುತ್ತೇನೆ. ನಾವು ಇದರಲ್ಲಿ ಹಸ್ತಕ್ಷೇಪ ಮಾಡಲ್ಲ. ಅವರು ಅಪಹರಣ ಪ್ರಕರಣವೊಂದರ ಕುರಿತು ನಿರೀಕ್ಷಣಾ ಜಾಮೀನಿಗೆ ಅರ್ಜಿ ಹಾಕಿದ್ದರು. ಆದರೆ ಅವರಿಗೆ ಜಾಮೀನು ಸಿಕ್ಕಿಲ್ಲ. ಹೀಗಾಗಿ ಅವರನ್ನು ಕಸ್ಟಡಿಗೆ ತೆಗೆದುಕೊಂಡಿರಬೇಕು ಅನಿಸತ್ತೆ ಎಂದರು.

ಮಹಿಳೆಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್‌.ಡಿ ರೇವಣ್ಣ ವಿರುದ್ಧ ದೂರು ದಾಖಲಾಗಿತ್ತು. ಈ ಬೆನ್ನಲ್ಲೇ ನಿರೀಕ್ಷಣಾ ಜಾಮೀನು ಕೋರಿ ರೇವಣ್ಣ ಅವರು ಕೋರ್ಟ್‌ ಮೊರೆ ಹೋಗಿದ್ದರು. ಇಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಅರ್ಜಿ ವಿಚಾರಣೆ ನಡೆಯಿತು. ಅರ್ಜಿ ವಜಾಗೊಳಿಸಿದರು.

ಇತ್ತ ಅರ್ಜಿ ವಜಾ ಆಗುತ್ತಿದ್ದಂತೆಯೇ ಹೆಚ್.ಡಿ ದೇವೇಗೌಡರ ನಿವಾಸದಿಂದ ರೇವಣ್ಣ ಅವರನ್ನು ಎಸ್‌ಐಟಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!