ಹೊಸದಿಗಂತ ಡಿಜಿಟಲ್ ಡೆಸ್ಕ್:
ಚನ್ನಪಟ್ಟಣದಲ್ಲಿ ಇಂದು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಅವರು ಮುಸ್ಲಿಂ ಧರ್ಮಗುರುಗಳ ಮನೆಗೆ ಭೇಟಿ ನೀಡಿದರು. ಚನ್ನಪಟ್ಟಣದಲ್ಲಿ ಮೊಮ್ಮಗ ನಿಖಿಲ್ ಕುಮಾರಸ್ವಾಮಿ ಗೆಲ್ಲಿಸುವಂತೆ ಮುಸ್ಲಿಂ ಸಮುದಾಯದ ಜನತೆಗೆ ಮನವಿ ಮಾಡಿಕೊಂಡಿದ್ದಾರೆ.
ಚನ್ನಪಟ್ಟಣದಲ್ಲಿ ಅಖಿಲ್ ಷಾ ಖಾದ್ರಿ ದರ್ಗಾದ ಧರ್ಮಗುರು ಸಯ್ಯದ್ ಮಸನ್ನ ಷಾ ಖಾದ್ರಿ ನಿವಾಸಕ್ಕೆ ಮಾಜಿ ಪ್ರಧಾನಿಗಳು ಭೇಟಿ ನೀಡಿದರು. ಈ ವೇಳೆ ಜೆಡಿಎಸ್ ಮುಖಂಡರು ಉಪಸ್ಥಿತರಿದ್ದರು.
ಚನ್ನಪಟ್ಟಣದಲ್ಲಿ ಮುಸ್ಲಿಂ ಸಮುದಾಯದವರ ಜತೆ ದೇವೇಗೌಡರು ಪ್ರಚಾರ ಸಭೆ ನಡೆಸಿದರು. ಕ್ಷೇತ್ರದಲ್ಲಿ ಎನ್‌ಡಿಎ ಅಭ್ಯರ್ಥಿಯಾಗಿ ಮೊಮ್ಮಗ ನಿಖಿಲ್ ಕುಮಾರಸ್ವಾಮಿ ಸ್ಪರ್ಧಿಸಿದ್ದಾರೆ. ಅವರ ಗೆಲುವಿಗೆ ಸಹಕರಿಸಿ ಎಂದು ಮುಸ್ಲಿಂ ಸಮಯದಾಯದ ಬೆಂಬಲ ಕೋರಿದರು.