Monday, March 4, 2024

ಇಂದೇ ಕುಟುಂಬ ಸಮೇತರಾಗಿ ಅಯೋಧ್ಯೆಗೆ ತೆರಳಲಿದ್ದಾರೆ ಹೆಚ್.ಡಿ.ಡಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಅಯೋಧ್ಯೆಯಲ್ಲಿ ರಾಮಲಲಾ ಪ್ರಾಣಪ್ರತಿಷ್ಠಾಪನೆಯಲ್ಲಿ ಪಾಲ್ಗೊಳ್ಳಲು ಮಾಜಿ ಪ್ರಧಾನಿ ದೇವೇಗೌಡರು ಕುಟುಂಬ ಸಮೇತ ಅಯೋಧ್ಯೆಗೆ ತೆರಳಲಿದ್ದಾರೆ.

ಜನವರಿ 22ರಂದು ಅಯೋಧ್ಯೆಯಲ್ಲಿ ಬಾಲರಾಮನ ಪಟ್ಟಾಭಿಷೇಕ ಮಹೋತ್ಸವ ನಡೆಯಲಿದ್ದು, ಈಗಾಗಲೇ ಸಿದ್ಧತೆಗಳು ಪೂರ್ಣಗೊಂಡಿದ್ದು, ಪೂಜಾ ವಿಧಿವಿಧಾನಗಳು ಆರಂಭಗೊಂಡಿವೆ. ಈ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಲು ಮಾಜಿ ಪ್ರಧಾನಿ ಹೆಚ್‌ಡಿಡಿ ಇಂದು ತಮ್ಮ ಪತ್ನಿ ಚೆನಮ್ಮ, ಪುತ್ರ ಹೆಚ್‌ಡಿ ಕುಮಾರಸ್ವಾಮಿ, ಸೊಸೆ ಅನಿತಾ ಕುಮಾರಸ್ವಾಮಿ ಮತ್ತು ಮೊಮ್ಮಗ ನಿಖಿಲ್ ಕುಮಾರಸ್ವಾಮಿ ಅವರೊಂದಿಗೆ ಯೋಧ್ಯೆಯತ್ತ ಪ್ರಯಾಣ ಬೆಳೆಸುತ್ತಿದ್ದಾರೆ.

ಪ್ರಾಣ ಪ್ರತಿಷ್ಠೆ ಕಾರ್ಯಕ್ರಮದಲ್ಲಿ ಭಾಗವಹಿಸಲು ಹೆಚ್ ಡಿಡಿ ವಿಶೇಷ ವಿಮಾನದಲ್ಲಿ ಕುಟುಂಬ ಸಮೇತ ತೆರಳಲಿದ್ದಾರೆ. ಈ ಮೂಲಕ ಶ್ರೀರಾಮನ ಕೃಪೆಗೆ ಪಾತ್ರರಾಗಲಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!